ಅಹಮದಾಬಾದ್: ಇಲ್ಲಿನ ಬಿ.ಜೆ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಪತನಗೊಂಡಿದ್ದ ಏರ್ ಇಂಡಿಯಾ ಬೋಯಿಂಗ್ 787-8 ವಿಮಾನದ ಎರಡನೆಯ ಬ್ಲ್ಯಾಕ್ ಬಾಕ್ಸ್ ಭಾನುವಾರ ಪತ್ತೆಯಾಗಿದೆ.
ವಿಮಾನದಲ್ಲಿ ಎರಡು ಬ್ಲ್ಯಾಕ್ ಬಾಕ್ಸ್‌ಗಳಿದ್ದವು. ವಿಮಾನದ ಫ್ಲೈಟ್ ಡೇಟಾ ರೆಕಾರ್ಡರ್ ಶುಕ್ರವಾರ ಪತ್ತೆಯಾಗಿತ್ತು.
'ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್' ಭಾನುವಾರ ಪತ್ತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹಿರಿಯ ಸಹಾಯಕ ಪಿ.ಕೆ. ಮಿಶ್ರಾ ತಿಳಿಸಿದ್ದಾರೆ.

