ಕಾಸರಗೋಡು: ಬೋವಿಕ್ಕಾನ ಕಾನತ್ತೂರು ಪೂಂಗಾಲಕ್ಕಯ ನಿವಾಸಿ, ಪ್ರಗತಿಪರ ಕೃಷಿಕ ಕೃóಷ್ಣ ಭಟ್(73)ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಕಳೆದ ಕೆಲವು ಸಮಯದಿಂದ ಬೆಂಗಳೂರಿನ ಪುತ್ರನ ಮನೆಯಲ್ಲಿ ವಾಸವಾಗಿದ್ದ ಇವರನ್ನು ಅಸೌಖ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ದೀರ್ಘ ಕಾಲ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಇವರು ಆರೆಸ್ಸೆಸ್, ಬಿಜೆಪಿಯ ಹಿರಿಯ ಸದಸ್ಯರಾಗಿದ್ದರು. ತುರ್ತು ಪರಿಸ್ಥಿತಿ ವಿರುದ್ಧದ ಹೋರಾಟದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅವರು ಪತ್ನಿ, ಪುತ್ರ, ಮೂವರು ಪುತ್ರಿಯರನ್ನು ಅಗಲಿದ್ದಾರೆ.


