HEALTH TIPS

ಸಿಂಧೂ ನದಿ ನೀರು ಕೊಡಲು ನಿರಾಕರಿಸಿದರೆ ಪಾಕ್ ಮತ್ತೆ ಯುದ್ಧ ಮಾಡಲಿದೆ: ಬಿಲಾವಲ್

ಇಸ್ಲಾಮಾಬಾದ್: ಸಿಂಧೂ ನದಿ ನೀರಿನ ಒಪ್ಪಂದದ(ಐಡಬ್ಲ್ಯುಟಿ) ಅನ್ವಯ ನ್ಯಾಯಯುತವಾಗಿ ನಮಗೆ ಸೇರಬೇಕಿರುವ ನೀರಿನ ಪಾಲನ್ನು ಕೊಡಲು ಒಪ್ಪದಿದ್ದರೆ ಭಾರತದ ವಿರುದ್ಧ ಪಾಕಿಸ್ತಾನ ಯುದ್ಧ ಸಾರಲಿದೆ ಎಂದು ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಜರ್ದಾರಿ ಹೇಳಿದ್ದಾರೆ.

26 ಮಂದಿ ಭಾರತೀಯರ ಜೀವ ತೆಗೆದ ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತವು 1960ರ ಸಿಂಧೂ ನದಿ ನೀರಿನ ಒಪ್ಪಂದವನ್ನು ರದ್ದು ಮಾಡಿತ್ತು. ಈ ಒಪ್ಪಂದವನ್ನು ಮರುಸ್ಥಾಪಿಸುವುದಿಲ್ಲ ಎಂದು ಕಳೆದ ವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದರು.

ಅಂತರರಾಷ್ಟ್ರೀಯ ಒಪ್ಪಂದದ ಬಗ್ಗೆ ಶಾ ಅವರ ಹೇಳಿಕೆ ಲಜ್ಜೆಗೇಡಿತನದ ನಿರ್ಲಕ್ಷ್ಯದಿಂದ ಕೂಡಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಟೀಕಿಸಿದ ಎರಡು ದಿನಗಳ ನಂತರ ಬಿಲಾವಲ್ ಅವರ ಹೇಳಿಕೆ ಬಂದಿದೆ.

ಸಂಸತ್ತಿನಲ್ಲಿ ಮಾಡಿದ ಭಾಷಣದಲ್ಲಿ ಬಿಲಾವಲ್, ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ನಿರ್ಧಾರವನ್ನು ವಿರೋಧಿಸಿದ್ದು, ಪಾಕಿಸ್ತಾನವು ನೀರಿನ ಪಾಲನ್ನು ಪಡೆದೇ ತೀರುವುದಾಗಿ ಹೇಳಿದ್ದಾರೆ.

ಭಾರತಕ್ಕೆ ಎರಡು ಆಯ್ಕೆಗಳಿವೆ. ನೀರನ್ನು ನ್ಯಾಯಯುತವಾಗಿ ಹಂಚಿಕೊಳ್ಳಿ, ಅಥವಾ ನಾವು ಆರು ನದಿಗಳಿಂದ ನೀರನ್ನು ಪಡೆದುಕೊಳ್ಳುತ್ತೇವೆ ಎಂದು ಸಿಂಧೂ ಜಲಾನಯನ ಪ್ರದೇಶದ ಆರು ನದಿಗಳನ್ನು ಉಲ್ಲೇಖಿಸಿ ಹೇಳಿದ್ದಾರೆ.

ಒಪ್ಪಂದದ ಸ್ಥಗಿತ ಸಾಧ್ಯವಿಲ್ಲದ ಕಾರಣ ಅದಿನ್ನೂ ಅಸ್ತಿತ್ವದಲ್ಲಿದೆ ಎಂದಿದ್ಧಾರೆ.

ಸಿಂಧೂ ಒಪ್ಪಂದ ಕೊನೆಗೊಂಡಿದೆ ಅಥವಾ ಸ್ಥಗಿತಗೊಂಡಿದೆ ಎಂಬ ಭಾರತದ ಹೇಳಿಕೆ ಕಾನೂನುಬಾಹಿರವಾಗಿದೆ. ಏಕೆಂದರೆ, ಒಪ್ಪಂದ ಸ್ಥಗಿತಗೊಂಡಿಲ್ಲ. ಇದು ಪಾಕಿಸ್ತಾನ ಮತ್ತು ಭಾರತ ಎರಡೂ ದೇಶಗಳ ಬದ್ಧತೆಯಾಗಿದೆ. ಆದರೆ, ನೀರನ್ನು ನಿಲ್ಲಿಸುವ ಬೆದರಿಕೆ ವಿಶ್ವಸಂಸ್ಥೆಯ ನಿಯಮಗಳ ಪ್ರಕಾರ ಕಾನೂನುಬಾಹಿರವಾಗಿದೆ ಎಂದು ಅವರು ಹೇಳಿದ್ದಾರೆ.

ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಮುಖ್ಯಸ್ಥರಾಗಿರುವ ಬಿಲಾವಲ್, ಭಾರತವು ಬೆದರಿಕೆಯನ್ನು ಮುಂದುವರಿಸಿದರೆ, ನಾವು ಮತ್ತೆ ಯುದ್ಧ ಮಾಡಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಮಾತುಕತೆ ನಿರಾಕರಿಸಿದರೆ ಮತ್ತು ಭಯೋತ್ಪಾದನೆಯ ಬಗ್ಗೆ ಯಾವುದೇ ಸಮನ್ವಯವಿಲ್ಲದಿದ್ದರೆ, ಎರಡೂ ದೇಶಗಳಲ್ಲಿ ಹಿಂಸಾಚಾರ ತೀವ್ರಗೊಳ್ಳುತ್ತದೆ ಎಂದಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries