HEALTH TIPS

ಭಾರತಕ್ಕೆ ಸಮಾಜವಾದ ಅಗತ್ಯವಿಲ್ಲ, ಜಾತ್ಯತೀತತೆ ಸಂಸ್ಕೃತಿಯ ಭಾಗವಲ್ಲ: ಕೇಂದ್ರ ಸಚಿವ

ವಾರಾಣಸಿ: ಭಾರತದಲ್ಲಿ ಸಮಾಜವಾದ ಅಗತ್ಯವಿಲ್ಲ, ಜಾತ್ಯತೀತತೆ ಭಾರತದ ಸಂಸ್ಕೃತಿಯ ಭಾಗವಲ್ಲ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಸಂವಿಧಾನ ಹಳಿಗೆ ತರಲು ಎಮರ್ಜೆನ್ಸಿ: 1975ರ ಶ್ವೇತಪತ್ರ ಬಿಡುಗಡೆ ಮಾಡಿದ ಕಾಂಗ್ರೆಸ್

ಸಂವಿಧಾನದ ಪೀಠಿಕೆಯಿಂದ ಸಮಾಜವಾದ ಹಾಗೂ ಜಾತ್ಯತೀತ ಎನ್ನುವ ಪದವನ್ನು ಕಿತ್ತು ಹಾಕಬೇಕು ಎಂದು ಆರ್‌ಎಸ್‌ಎಸ್‌ನ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ ಮರುದಿನವೇ ಕೇಂದ್ರ ಸಚಿವರಿಂದ ಈ ಹೇಳಿಕೆ ಹೊರಬಿದ್ದಿದೆ.

ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆಗೆ 50 ವರ್ಷ ಸಂದ ಹಿನ್ನೆಲೆಯಲ್ಲಿ ನಡೆಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಚೌಹಾಣ್, 'ಭಾರತದಲ್ಲಿ ಸಮಾಜವಾದ ಅಗತ್ಯವಿಲ್ಲ. ಧರ್ಮನಿರಪೇಕ್ಷತೆ ನಮ್ಮ ದೇಶದ ಸಂಸ್ಕೃತಿಯ ಭಾಗವೂ ಅಲ್ಲ, ಹೀಗಾಗಿ ಇದರ ಬಗ್ಗೆ ಚರ್ಚೆ ನಡೆಸಬೇಕಾದ ಅಗತ್ಯ ಇದೆ' ಎಂದು ಹೇಳಿದ್ದಾರೆ.

ತುರ್ತು ಪರಿಸ್ಥಿತಿಯ ದಿನಗಳನ್ನು ಮೆಲುಕು ಹಾಕಿದ ಅವರು, ಅಧಿಕಾರವನ್ನು ಉಳಿಸಿಕೊಳ್ಳಲು ಇಂದಿರಾಗಾಂಧಿ ತುರ್ತು ಪರಿಸ್ಥಿತಿಯನ್ನು ಹೇರಿದರು. ಆಂತರಿಕ ಅಥವಾ ಬಾಹ್ಯ ಭದ್ರತೆಗೆ ಯಾವುದೇ ಬೆದರಿಕೆ ಇರಲಿಲ್ಲ. ಪ್ರಧಾನ ಮಂತ್ರಿ ಕುರ್ಚಿಗೆ ಮಾತ್ರ ಬೆದರಿಕೆ ಇತ್ತು. ಹೀಗಾಗಿ ಸಚಿವ ಸಂಪುಟ ಸಭೆಯನ್ನೂ ನಡೆಸದೇ 1975ರ ಜೂನ್ 25 ರಂದು ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದರು ಎಂದು ಚೌಹಾಣ್ ಹೇಳಿದ್ದಾರೆ.

ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡುವಾಗ ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಹಾಗೂ ಪಿಂಚಣಿ ಸಚಿವ ಜಿತೇಂದ್ರ ಸಿಂಗ್ ಕೂಡ ಇಂತಹದ್ದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. 'ಸಮಾಜವಾದ ಹಾಗೂ ಜಾತ್ಯತೀತ ಪದಗಳು ಡಾ. ಭೀಮರಾವ್ ಅಂಬೇಡ್ಕರ್ ರಚಿಸಿದ ಸಂವಿಧಾನದ ಭಾಗವಾಗಿರಲಿಲ್ಲ. ಸರಿಯಾಗಿ ಆಲೋಚನೆ ಮಾಡುವ ನಾಗರಿಕರಿಗೆ ಇದು ಅರ್ಥವಾಗುತ್ತದೆ ಎಂದಿದ್ದರು.

ತುರ್ತು ಪರಿಸ್ಥಿತಿ ಘೋಷಣೆಯಾಗಿ ಬಂಧನಕ್ಕೊಳಗಾದಾಗ ನನಗೆ 16 ವರ್ಷ. ಆ ಕರಾಳ ದಿನಗಳನ್ನು ನೆನಪಿಸಿಕೊಂಡರೆ ನನಗೆ ಈಗಲೂ ಮೈನವಿರೇಳುತ್ತದೆ. ಪ್ರತಿಭಟಿಸಿದವರ ಮೇಲೆ ಗುಂಡು ಹಾರಿಸಲಾಯಿತು. ಅದು ಸಾರ್ವಜನಿಕರ ಮೇಲೆ ಹಾರಿಸಿದ ಗುಂಡುಗಳಲ್ಲ, ಸಂವಿಧಾನದ ಕೊಲೆಯಾಗಿತ್ತು ಎಂದು ಚೌಹಾಣ್ ಹೇಳಿದ್ದಾರೆ.

ನಾಗರಿಕ ಹಕ್ಕುಗಳನ್ನು ಅಮಾನತ್ತಿನಿಡಲಾಗಿತ್ತು. ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಿ, ನ್ಯಾಯಾಲಯಗಳ ಅಧಿಕಾರವನ್ನು ಮೊಟಕುಗೊಳಿಸಿ, ಇಡೀ ದೇಶವನ್ನೇ ಜೈಲಾಗಿ ಪರಿವರ್ತಿಸಿದ್ದು, ವಿದ್ಯಾರ್ಥಿಗಳನ್ನೂ ಸೇರಿ ವಿರೋಧ ಪಕ್ಷದ ಎಲ್ಲಾ ನಾಯಕರನ್ನು ಜೈಲಿನಲ್ಲಿರಿಸಿದ್ದು ಸಂವಿಧಾನದ ಹತ್ಯೆ ಎಂದು ಚೌಹಾಣ್ ಹೇಳಿದ್ದಾರೆ.

'ಆ ಕರಾಳ ದಿನಗಳು ಇನ್ನೂ ನೆನಪಿವೆ. ಸರ್ವಾಧಿಕಾರವು ಕಾಂಗ್ರೆಸ್‌ನ ಡಿಎನ್‌ಎಯಲ್ಲಿದೆ. ಸಂವಿಧಾನದ ಪ್ರತಿಯನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವವರು ಉತ್ತರಿಸಬೇಕಾಗುತ್ತದೆ' ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಹೆಸರೆತ್ತದೆ ಟೀಕೆ ಮಾಡಿದ್ದಾರೆ.

ಕಾಂಗ್ರೆಸ್ ಪ್ರಜಾಪ್ರಭುತ್ವವನ್ನು ಕಲಿಯಲು ಬಯಸಿದರೆ, ಅದು ಪ್ರಧಾನಿ ನರೇಂದ್ರ ಮೋದಿಯವರಿಂದ ಕಲಿಯಬೇಕು. ಭಾರತೀಯ ಜನತಾ ಪಕ್ಷವು ಪ್ರಜಾಪ್ರಭುತ್ವದ ಚೈತನ್ಯವನ್ನು ಗೌರವಿಸುತ್ತದೆ. ಐತಿಹಾಸಿಕ ತಪ್ಪು ಮಾಡಿದ ಕಾಂಗ್ರೆಸ್ ಕ್ಷಮೆ ಯಾಚಿಸಬೇಕು' ಎಂದಿದ್ದಾರೆ.

'ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವವನ್ನು ಬಲವಾಗಿ ನಂಬುತ್ತಾರೆ. ಅದಕ್ಕಾಗಿಯೇ ಸಂವಿಧಾನ ದಿನವನ್ನು ಆಚರಿಸುವ ಕೆಲಸವನ್ನು ಪ್ರಧಾನಿ ಮಾಡಿದ್ದಾರೆ. ಪ್ರಜಾಪ್ರಭುತ್ವವು ಭಾರತೀಯ ಜನತಾ ಪಕ್ಷದ ಸ್ವರೂಪದಲ್ಲಿದೆ' ಎಂದು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries