ಮಿರ್ಜಾಪುರ: ಇಲ್ಲಿನ ಚಾಕ್ಕೊದರ್ ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
'ಸೋಮವಾರ ರಾತ್ರಿ ಘಟನೆ ನಡೆದಿದೆ. 24 ಗಂಟೆಗಳ ಒಳಗಾಗಿ ಹೊಸ ಪ್ರತಿಮೆಯನ್ನು ಸ್ಥಾಪಿಸುವುದಾಗಿ ಭರವಸೆ ನೀಡಿದ ಬಳಿಕ ಗ್ರಾಮಸ್ಥರು ಪ್ರತಿಭಟನೆ ವಾಪಸ್ ಪಡೆದಿದ್ದಾರೆ' ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಓಂಪ್ರಕಾಶ್ ಸಿಂಗ್ ತಿಳಿಸಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಅವರು ಆರು ತಿಂಗಳ ಹಿಂದಷ್ಟೇ ಈ ಪ್ರತಿಮೆ ಉದ್ಘಾಟಿಸಿದ್ದರು.




