ಕಾಸರಗೋಡು: ನಗರದ ಬಿ.ಇ.ಎಂ. ಹೈಯರ್ ಸೆಕೆಂಡರಿ ಶಾಲಾ ವಿದ್ಯಾರ್ಥಿಗಳು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಂದ ಪರಿಸರ ಜಾಗೃತಿ ಬಗ್ಗೆ ಕಾಸರಗೋಡು ನಗರದಲ್ಲಿ ಮರಣಿಗೆ ಹಾಗೂ ಹಳೇ ಬಸ್ ನಿಲ್ದಾಣ ವಠಾರದಲ್ಲಿ ಪರಿಸರ ಸಂರಕ್ಷಣೆ ಸಂದೇಶ ಸಾರುವ ನೃತ್ಯ ಕಾರ್ಯಕ್ರಮ ಆಯೋಜಿಸಲಾಯಿತು.
ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಕಾಸರಗೋಡು ನಗರಸಭಾ ಅಧ್ಯಕ್ಷ ಅಬ್ಬಾಸ್ ಬೀಗಂ, ಟೌನ್ ಸಬ್ ಇನ್ ಸ್ಪೆಕ್ಟರ್ ಶಶಿಧರನ್ ಅವರು ತೆಂಗಿನ ಗಿಡ ನೆಡುವ ಮೂಲಕ ಪರಿಸರ ದಿನವನ್ನು ಉದ್ಘಾಟಿಸಿದರು.
ಶಾಲಾ ಪ್ರಾಂಶುಪಾಲ ರಾಜೇಶ್‍ಚಂದ್ರ, ನಗರಸಭಾ ಸದಸ್ಯೆ ಶ್ರೀಲತಾ ಟೀಚರ್, ಸಾರ್ವಜನಿಕ ಶಿಕ್ಷಣ ಸಂರಕ್ಷಣಾ ಯಜ್ಞ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರೇಮ್‍ಜಿತ್, ಶಾಲಾ ಪ್ರಾಧ್ಯಾಪಕ ಶಾಜಿ, ಹರಿನಾಥ್, ಎನ್.ಸಿ.ಸಿ, ಗೈಡ್ ಹಾಗೂ ಎನ್.ಎಸ್.ಎಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



