ಪೆರ್ಲ: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗ ಸಂಸ್ಥೆ ಪೆರ್ಲದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಪ್ರಾರಂಭೋತ್ಸವ ಕಾರ್ಯಕ್ರಮ ಗುರವಾರ ನಡೆಯಿತು. ನಾಲಂದ ಮಹಾ ವಿದ್ಯಾಲಯದ ಆಡಳಿತ ಮಂಡಳಿಯ ಹಿರಿಯ ಸದಸ್ಯೆ ಪ್ರಭಾವತಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಕೆ.ಎಂ.ಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು.
ವಿವೇಕಾನಂದ ಸೆಂಟ್ರಲ್ ಸ್ಕೂಲ್ ಗೌರವ ಸಲಹೆಗಾರ ಕಜಂಪಾಡಿ ಸುಬ್ರಮಣ್ಯ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಕಾಲಕ್ಕೆ ತಕ್ಕಂತೆ ಎಲ್ಲರೂ ಬದಲಾಗಬೇಕು. ನಮ್ಮ ಶಿಕ್ಷಣ ವ್ಯವಸ್ಥೆ ಬದಲಾಗಿದೆ. ಸನಾತನ ಧರ್ಮ, ಸಂಸ್ಕøತಿಗಳ ತಳಹದಿಯಲ್ಲಿ ಆಂಗ್ಲ ಭಾಷಾ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದರು.
ನಾಲಂದ ಮಹಾವಿದ್ಯಾಲಯದ ಕಾರ್ಯದರ್ಶಿ ಡಾ. ಜಯಗೋವಿಂದ ಉಕ್ಕಿನಡ್ಕ, ಪ್ರಾಂಶುಪಾಲ ಶಂಕರ ಖಂಡಿಗೆ ಶುಭ ಹಾರೈಸಿದರು. ಶ್ಯಾಮಲಾ ಪತ್ತಡ್ಕ, ಪ್ರಮತಿ ದೇವಧರ್ ಹಾಗೂ ಅಶ್ವಿತಾ ಪ್ರಾರ್ಥನೆ ಹಾಡಿದರು. ಶಾಲಾ ಸಮಿತಿ ಅಧ್ಯಕ್ಷ ಶ್ರೀಹರಿ ಆರ್. ಭರಣೀಕರ್ ಸ್ವಾಗತಿಸಿ, ಪುಷ್ಪಾ ಅಮೆಕ್ಕಳ ವಂದಿಸಿದರು. ನಳಿನಿ ಸೈಪಂಗಲ್ಲು ನಿರೂಪಿಸಿದರು.




.jpg)

