ಕಾಸರಗೋಡು: ಜನಸಂಘದ ಅಧ್ಯಕ್ಷ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಹುತಾತ್ಮ ದಿನವನ್ನು ಕಾಸರಗೋಡು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಆಚರಿಸಲಾಯಿತು. ಬಿಜೆಪಿ ಜಿಲ್ಲಾ ಸಮಿತಿ ವತಿಯಿಂದ ಕಾರ್ಯಕ್ರಮ ನಡೆಯಿತು.
ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಜನಸಂಘದ ಪ್ರಥಮ ಅಧ್ಯಕ್ಷರಾಗಿದ್ದ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಅವರು ಭಾರತದ ನಿಜವಾದ ರಾಷ್ಟ್ರೀಯವಾದಿ ನೇತಾರರಾಗಿದ್ದರು ಎಂದು ತಿಳಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನೀಲ್, ಬಿಜೆಪಿ ರಾಜ್ಯ ಸಮಿತಿ ಸದಸ್ಯೆ ಸವಿತಾ ಟೀಚರ್, ಮಾಜಿ ಜಿಲ್ಲಾ ಉಪಾಧ್ಯಕ್ಷ ಪಿ. ರಮೇಶ್, ಜಿಲ್ಲಾ, ಬ್ಲಾಕ್ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.


