ಕಾಸರಗೋಡು: ಜಿಲ್ಲೆಯಲ್ಲಿ ಪ್ಲಸ್ ಟು ತರಗತಿಯಲ್ಲಿ ಫಲಿತಾಂಶ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಕಾಸರಗೋಡು ಜಿಲ್ಲಾ ಪಂಚಾಯಿತಿ ಸಮಗ್ರ ಯೋಜನೆ ಪ್ರಾರಂಭಿಸಿದೆ. ಜಿಲ್ಲೆಯಲ್ಲಿ ಈಗಾಗಲೇ ಶೇ. 50 ಕ್ಕಿಂತ ಕಡಿಮೆ ಫಲಿತಾಂಶ ಪ್ರಮಾಣ ದಾಖಲಿಸಿರುವ ಶಾಲೆಗಳ ಫಲಿತಾಂಶ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.
ಜಿಲ್ಲೆಯಲ್ಲಿ ಪ್ಲಸ್ ಟು ಫಲಿತಾಂಶ ಪ್ರಮಾಣ ಹೆಚ್ಚಿಸಲು ಕಲಿಕಾ ಸಾಮಥ್ರ್ಯ ಮತ್ತು ಹಿನ್ನೆಲೆಯನ್ನು ನಿರ್ಣಯಿಸಲಾಗುತ್ತದೆ. ಉತ್ತಮ ಕಲಿಕಾ ವಾತಾವರಣವನ್ನು ಸೃಷ್ಟಿಸಲು ಅಗತ್ಯವಾದ ಅಧ್ಯಯನ ಸಾಮಗ್ರಿಗಳು, ತಿಂಡಿಗಳು ಇತ್ಯಾದಿಗಳನ್ನು ಒದಗಿಸಲಾಗುತ್ತದೆ.
ಇದರ ಭಾಗವಾಗಿ, ಶೇ.50 ಕ್ಕಿಂತ ಕಡಿಮೆ ಫಲಿತಾಂಶ ದಾಖಲಿಸಿದ ಶಾಲೆಗಳ ಮುಖ್ಯಸ್ಥರೊಂದಿಗೆ ವಿಶೇಷ ಸಭೆ ನಡೆಸಲಾಯಿತು. ಯೋಜನೆಯ ಮೊದಲ ಹಂತದಲ್ಲಿ, ಶಾಲೆಗಳಲ್ಲಿ ಶಿಕ್ಷಕ-ಪೆÇೀಷಕ ಸಮಿತಿ ಸಭೆಗಳನ್ನು ಆಯೋಜಿಸಲಾಗುವುದು. ಮಂತರ, ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ಅವರ ಕಲಿಕಾ ಸಾಮಥ್ರ್ಯ ಮತ್ತು ಹಿನ್ನೆಲೆಯನ್ನು ನಿರ್ಣಯಿಸಲಾಗುತ್ತದೆ. ಉತ್ತಮ ಕಲಿಕಾ ವಾತಾವರಣವನ್ನು ಸೃಷ್ಟಿಸಲು ಅಗತ್ಯವಾದ ಅಧ್ಯಯನ ಸಾಮಗ್ರಿ, ಲಘು ಉಪಹಾರ ಇತ್ಯಾದಿಗಳನ್ನು ಒದಗಿಸಲಾಗುವುದು.





