ಪತ್ತನಂತಿಟ್ಟ: ಶಬರಿಮಲೆ ಸನ್ನಿಧಿ ಮತ್ತು ಪಂಪಾದಲ್ಲಿ ಭಾರೀ ಮಳೆಯಾಗುತ್ತಿದೆ. ಪಂಪಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಿರುವ ಹಿನ್ನೆಲೆಯಲ್ಲಿ, ಭಕ್ತರು ಪಂಪಾ ನದಿಗೆ ಪ್ರವೇಶಿಸುವುದು ಮತ್ತು ತ್ರಿವೇಣಿಯಲ್ಲಿ ಸ್ನಾನ ಮಾಡುವುದನ್ನು ಜಿಲ್ಲಾಧಿಕಾರಿ ತಾತ್ಕಾಲಿಕವಾಗಿ ನಿಷೇಧಿಸಿದ್ದಾರೆ.
ಪಂಪಾ ತ್ರಿವೇಣಿಯಲ್ಲಿ ವಾಹನ ನಿಲುಗಡೆಗೂ ತಾತ್ಕಾಲಿಕ ನಿರ್ಬಂಧವಿದೆ. ಪಂಪಾ-ಸನ್ನಿಧಾನಂ ಮಾರ್ಗದಲ್ಲಿ ಭಾರೀ ಮಳೆ ಬೀಳುತ್ತಿರುವುದರಿಂದ ಭಕ್ತರು ಬೆಟ್ಟ ಋಉವ ವೇಳೆ ಜಾಗರೂಕರಾಗಿರಲು ಸೂಚಿಸಲಾಗಿದೆ.
ಮುಂದಿನ ಐದು ದಿನಗಳವರೆಗೆ ರಾಜ್ಯದಲ್ಲಿ ಭಾರೀ ಮಳೆ ಮುಂದುವರಿಯಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಸಿದೆ. ಉತ್ತರ ಕೇರಳದಲ್ಲಿ ಭಾನುವಾರ ಮತ್ತು ಸೋಮವಾರ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯ ಬಗ್ಗೆ ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಭಾನುವಾರ ಮತ್ತು ಸೋಮವಾರ ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಕರಾವಳಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಎಚ್ಚರಿಕೆ ನೀಡಲಾಗಿದೆ.





