HEALTH TIPS

ಇರಾನ್ ಮೇಲೆ ಅಮೆರಿಕ ದಾಳಿ 'ಅಪಾಯಕಾರಿ ತಿರುವು' ಪಡೆದುಕೊಂಡಿದೆ: ವಿಶ್ವಸಂಸ್ಥೆ

ವಿಶ್ವಸಂಸ್ಥೆ: ಇರಾನ್‌ನ ಮೂರು ಪರಮಾಣು ಘಟಕಗಳ ಮೇಲೆ ಅಮೆರಿಕ ನಡೆಸಿದ ಬಾಂಬ್ ದಾಳಿಯಿಂದ ಮಧ್ಯಪ್ರಾಚ್ಯದಲ್ಲಿನ ಪರಿಸ್ಥಿತಿ 'ಅಪಾಯಕಾರಿ ತಿರುವು' ಪಡೆದುಕೊಂಡಿದೆ ಎಂದು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆಯಂಟೊನಿಯೊ ಗುಟೆರಸ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಭಾನುವಾರ ನಡೆದ ವಿಶ್ವಸಂಸ್ಥೆಯ 15 ರಾಷ್ಟ್ರಗಳ ಭದ್ರತಾ ಮಂಡಳಿಯ ತುರ್ತು ಸಭೆಯ ಬಳಿಕ ಪ್ರತಿಕ್ರಿಯಿಸಿದ ಗುಟೆರಸ್, ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಆರಂಭದಿಂದಲೂ ಯಾವುದೇ ಮಿಲಿಟರಿ ಕಾರ್ಯಾಚರಣೆಯನ್ನು ನಾನು ಖಂಡಿಸುತ್ತಲೇ ಬಂದಿದ್ದೇನೆ ಎಂದು ಹೇಳಿದ್ದಾರೆ.

ಈ ಪ್ರದೇಶದ ಜನರು ಮತ್ತೊಂದು ವಿನಾಶವನ್ನು ಸಹಿಸಲು ಸಾಧ್ಯವಿಲ್ಲ. ಆದರೆ ಈಗ ಪ್ರಚೋದನೆಗೆ ಪ್ರತೀಕಾರದ ಅಪಾಯ ಎದುರಾಗಿದೆ ಎಂದು ಹೇಳಿದ್ದಾರೆ.

'ಈ ಬಿಕ್ಕಟ್ಟನ್ನು ಶಮನಗೊಳಿಸಲು ಅಂತರರಾಷ್ಟ್ರೀಯ ಸಮುದಾಯವು ತಕ್ಷಣವೇ ಕಾರ್ಯಪ್ರವೃತ್ತವಾಗಬೇಕು. ಅಲ್ಲದೆ ಇರಾನ್ ಪರಮಾಣು ಕಾರ್ಯಕ್ರಮದ ಕುರಿತು ಗಂಭೀರ ಮಾತುಕತೆಗೆ ಮರಳಬೇಕು' ಎಂದು ಹೇಳಿದ್ದಾರೆ.

'ಅಂತರರಾಷ್ಟ್ರೀಯ ಶಾಂತಿ ಹಾಗೂ ಭದ್ರತೆಗೆ ಮೂಲ ಆಧಾರವಾಗಿರುವ ಅಣ್ವಸ್ತ್ರ ಪ್ರಸರಣ ನಿಷೇಧ ಒಪ್ಪಂದವನ್ನು ಇರಾನ್ ಸಂಪೂರ್ಣವಾಗಿ ಗೌರವಿಸಬೇಕು' ಎಂದಿದ್ದಾರೆ.

ಭದ್ರತಾ ಮಂಡಳಿಯ ಎಲ್ಲ ಸದಸ್ಯ ರಾಷ್ಟ್ರಗಳು ಸಂಯಮ ಹಾಗೂ ತುರ್ತಾಗಿ ಕಾರ್ಯನಿರ್ವಿಸುವಂತೆ ನಾನು ಒತ್ತಾಯಿಸುತ್ತೇನೆ. ಶಾಂತಿಯ ನಿರೀಕ್ಷೆಯನ್ನು ಕೈಬಿಡಬಾರದು ಎಂದು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries