ತಿರುವನಂತಪುರಂ: ರಾಜ್ಯದಲ್ಲಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಕೇಂದ್ರ ಹವಾಮಾನ ಇಲಾಖೆ ವಿವಿಧ ಜಿಲ್ಲೆಗಳಲ್ಲಿ ಆರೆಂಜ್ ಮತ್ತು ಯೆಲ್ಲೋ ಎಚ್ಚರಿಕೆ ನೀಡಿದೆ.
ಇಡುಕ್ಕಿ, ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಗುರುವಾರ ಆರೆಂಜ್ ಎಚ್ಚರಿಕೆ ನೀಡಲಾಗಿದೆ.
ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಎಲ್ಲೋ ಎಚ್ಚರಿಕೆ ನೀಡಲಾಗಿದೆ. ಜೂನ್ 27 ಮತ್ತು 28 ರಂದು ಕೊಟ್ಟಾಯಂ, ಇಡುಕ್ಕಿ, ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.
ವಯನಾಡ್‍ನಲ್ಲಿ ಕಬಿನಿ (ಕಾಕವಯಲ್ ನಿಲ್ದಾಣ) ನದಿಯ ನೀರಿನ ಮಟ್ಟ ಅಪಾಯಕಾರಿಯಾಗಿ ಏರಿಕೆಯಾಗುತ್ತಿರುವುದರಿಂದ ರಾಜ್ಯ ನೀರಾವರಿ ಇಲಾಖೆ ಯೆಲ್ಲೋ ಎಚ್ಚರಿಕೆ ನೀಡಿದೆ. ಈ ನದಿಗಳ ದಡದಲ್ಲಿ ವಾಸಿಸುವ ಜನರು ಜಾಗರೂಕರಾಗಿರಬೇಕು ಮತ್ತು ಯಾವುದೇ ಸಂದರ್ಭದಲ್ಲೂ ನದಿಗಳನ್ನು ಪ್ರವೇಶಿಸಬಾರದು ಅಥವಾ ನದಿಯನ್ನು ದಾಟಬಾರದು ಎಂದು ನೀರಾವರಿ ಇಲಾಖೆ ತಿಳಿಸಿದೆ.
ವಿಪತ್ತು ಪೀಡಿತ ಪ್ರದೇಶಗಳಲ್ಲಿ ವಾಸಿಸುವವರು ತಮ್ಮ ಪ್ರದೇಶದಲ್ಲಿ ಶಿಬಿರಗಳನ್ನು ತೆರೆಯಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು ಮತ್ತು ಹಗಲಿನ ವೇಳೆಯಲ್ಲಿ ಅಲ್ಲಿಗೆ ತೆರಳಬೇಕು. ಇದಕ್ಕಾಗಿ ಅವರು ಸ್ಥಳೀಯಾಡಳಿತ ಸಂಸ್ಥೆ ಮತ್ತು ಕಂದಾಯ ಅಧಿಕಾರಿಗಳನ್ನು ಸಂಪರ್ಕಿಸಬಹುದು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತಾಲ್ಲೂಕು ಮತ್ತು ಜಿಲ್ಲಾ ನಿಯಂತ್ರಣ ಕೊಠಡಿಗಳು ಕಾರ್ಯನಿರ್ವಹಿಸುತ್ತಿದ್ದು, ಅವು 24*7 ಕಾರ್ಯನಿರ್ವಹಿಸುತ್ತವೆ. ಯಾವುದೇ ಅಪಾಯದ ಸಂದರ್ಭದಲ್ಲಿ, ಸಹಾಯಕ್ಕಾಗಿ ಟೋಲ್-ಫ್ರೀ ಸಂಖ್ಯೆಗಳು 1077 ಮತ್ತು 1070 ಅನ್ನು ಸಂಪರ್ಕಿಸಬಹುದು.





