ಸಮರಸ ಚಿತ್ರಸುದ್ದಿ: ಬದಿಯಡ್ಕ: ಬದಿಯಡ್ಕ ಚಿನ್ಮಯ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಯೋಗ ಶಿಕ್ಷಕಿ ದಿವ್ಯ ಯೋಗದ ಮಹತ್ವವನ್ನು ತಿಳಿಸಿಕೊಟ್ಟರು. ಬಳಿಕ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು. ಶಾಲೆಯ ಮುಖ್ಯೋಪಾಧ್ಯಾಯನಿ ಮಾನಸ ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿ ವರ್ಷ ವಿ. ಎಸ್ ಕಾರ್ಯಕ್ರಮ ನಿರೂಪಿಸಿದಳು.




.jpg)
