ಕಾಸರಗೋಡು: ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನ ಹಾಗೂ ಕಾಸರಗೋಡು ಕನ್ನಡಗ್ರಾಮ ವತಿಯಿಂದ ನಾಡೋಜ, ಡಾ. ಕಯ್ಯಾರ ಕಿಞಣ್ಣ ರೈ ಅವರ 110ನೇ ಜನ್ಮದಿನವನ್ನು ಆಚರಿಸಲಾಯಿತು. ಕಾಸರಗೋಡು ಕನ್ನಡ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನ ಅಧ್ಯಕ್ಷ ಶಿವರಾಮ ಕಾಸರಗೋಡು ಉದ್ಘಾಟಿಸಿ, ನಾಡೋಜ ಕಯ್ಯಾರ ಕಿಞಣ್ಣ ರೈ ಅವರ ಸಾಹಿತ್ಯ ಮತ್ತು ಜೀವನ ಸಾಧನೆ ಬಗ್ಗೆ ಮಾತನಾಡಿದರು.
ಕಾಸರಗೋಡು ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೋಟೆಕಣಿ, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಜಗದೀಶ್ ಕೂಡ್ಲು, ಜೆಸಿಐ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಕಾಂತ ಕಾಸರಗೋಡು, ಪತ್ರಕರ್ತ ಪ್ರದೀಪ್ ಬೇಕಲ್ ಮೊದಲಾದವರು ಉಪಸ್ಥಿತರಿದ್ದರು.


