ತಿರುವನಂತಪುರಂ: ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ 25 ಲೀಟರ್ ಹಾಲು ಕದ್ದಿದ್ದ ಉದ್ಯೋಗಿಯನ್ನು ಬಂಧಿಸಲಾಗಿದೆ. ಸಹಾಯಕ ಅಂಗಡಿ ಪಾಲಕ ಸುನಿಲ್ ಕುಮಾರ್ ಅವರನ್ನು ಬಂಧಿಸಲಾಗಿದೆ.
ನಿರಂತರವಾಗಿ ಹಾಲು ಕಳ್ಳತನವಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ದೇವಾಲಯದ ಜಾಗೃತ ದಳ ಸ್ಥಳದಲ್ಲಿ ಕಣ್ಗಾವಲು ಹೆಚ್ಚಿಸಿತ್ತು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕಳ್ಳ ಸಿಕ್ಕಿಬಿದ್ದಿದ್ದಾನೆ.
ಆದರೆ, ಇನ್ನೂ ನೌಕರನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಕಳ್ಳತನವನ್ನು ಮುಚ್ಚಿಹಾಕಲು ಪ್ರಯತ್ನ ನಡೆದಿದೆ ಎಂಬ ಆರೋಪವೂ ಇದೆ.


