ನವದೆಹಲಿ/ಕೆನಾನಸ್ಕಿಸ್: ಪರಸ್ಪರರ ಹೈಕಮಿಷನರ್‌ಗಳನ್ನು ಕರೆಸಿಕೊಳ್ಳುವ ಮೂಲಕ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧವನ್ನು ಮರುಸ್ಥಾಪನೆ ಮಾಡುವುದಕ್ಕೆ ಭಾರತ ಮತ್ತು ಕೆನಡಾ ಬುಧವಾರ ಸಮ್ಮತಿಸಿದವು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅವರು ಇದಕ್ಕೆ ಸಮ್ಮತಿಸಿದ್ದಾರೆ.
ಜಿ-7 ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಮೋದಿ ಅವರು, ಇದೇ ಸಂದರ್ಭದಲ್ಲಿ ಕಾರ್ನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಖಾಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಹರದೀಪ್ ಸಿಂಗ್ ನಿಜ್ಜರ್ ಹತ್ಯೆ ನಂತರ, ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧದಲ್ಲಿ ಬಿರುಕು ಮೂಡಿತ್ತು.

