ಕಾಸರಗೋಡು : ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ ಸಂಭ್ರಮ ಜೂ. 8ರಂದು ಮಧ್ಯಾಹ್ನ 3ಕ್ಕೆ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಗ್ರಂಥಾಲಯ ಸಭಾಂಗಣದಲ್ಲಿ ಜರುಗಲಿದೆ. ಕನ್ನಡ ಭವನ ಮತ್ತು ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಆಶ್ರಯದಲ್ಲಿ ಕಾರ್ಯಕ್ರಮ ಜರುಗಲಿದೆ. ಕನ್ನಡ ಭವನ ರೂವಾರಿಗಳಾದ ಡಾ. ವಾಮನ್ ರಾವ್ ಬೇಕಲ್ ಮತ್ತು ಸಂಧ್ಯಾರಾಣಿ ದಂಪತಿ ಡಾ. ಕಯ್ಯಾರ ಕಿಞಣ್ಣ ರೈ ಅವರ ಭಾವಚಿತ್ರಕ್ಕೆ ಹಾರಾರ್ಪಣೆಗೈಯುವ ಮೂಲಕ ಕಾರ್ಯಕ್ರಮ ಚಾಲನೆ ನೀಡುವರು. ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಅಧ್ಯಕ್ಷ ಡಾ ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸುವರು. ಗಡಿನಾಡ ಚೇತನ ಪ್ರಶಸ್ತಿ ಪುರಸೃತ ಕವಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ ನುಡಿ ನಮನ ಸಲ್ಲಿಸುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಎ.ಆರ್. ಸುಬ್ಬಯ್ಯಕಟ್ಟೆ ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ಈ ಸಂದರ್ಭ ವೈದ್ಯ ಸಾಹಿತಿ ಡಾ. ರಮಾನಂದ ಬನಾರಿ, ಸಾಹಿತಿ ಡಾ. ಶಿವಾನಂದ ಬೇಕಲ್, ಆಕಾಶವಾಣಿ ನಿವೃತ್ತ ಅಧಿಕಾರಿಗಳಾದ ಸಾಹಿತಿ ಡಾ. ವಸಂತ್ ಕುಮಾರ್ ಪೆರ್ಲ, ಸಾಹಿತಿ ಡಾ. ಸದಾನಂದ ಪೆರ್ಲ ಅವರಿಗೆ 'ನಾಡೋಜ ಡಾ. ಕಯ್ಯಾರ ಕಿಞಣ್ಣ ರೈ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ-2025" ನೀಡಿ ಗೌರವಿಸಲಾಗುವುದು. ಈ ಸಂದರ್ಭ ಕೇರಳ ರಾಜ್ಯ-ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ "ಕಯ್ಯಾರ ಕವಿಗೋಷ್ಠಿ-ಕಯ್ಯಾರ ಗಾಯನ' ನಡೆಯಲಿರುವುದು. ಪರಿಷತ್ ಸಂಘಟನಾ ಕಾರ್ಯದರ್ಶಿ ಶಾರದಾ ಮೊಳೆಯಾರ್ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸುವರು. ಪರಿಷತ್ ಗೌರವಾಧ್ಯಕ್ಷ ವಿ.ಬಿ. ಕುಳಮರ್ವ ಪರಿಷತ್ ಉಪಾಧ್ಯಕ್ಷ ನರಸಿಂಹ ಭಟ್ ಏತಡ್ಕ, ಕಾರ್ಯದರ್ಶಿ ದೇವರಾಜ್ ಆಚಾರ್ಯ ಸೂರಂಬೈಲ್ ಪಾಲ್ಗೊಳ್ಳುವರು. ಕವಿಗೋಷ್ಠಿಯಲ್ಲಿ ಹಲವು ಮಂದಿಕವಿಗಳು ಕವನವಾಚನ ನಡೆಸುವರು.






