ಪೆರ್ಲ: ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ನೇತೃತ್ವದಲ್ಲಿ ವಿಶ್ವ ಯೋಗ ದಿನ ಹಾಗೂ ಯೋಗ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಯೋಗ ಗುರು ಸೀತಾರಾಮ ಭಟ್ ಮುಂಗಿಲ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ 3 ದಿನಗಳ ವಿಶೇಷ ಯೋಗ ಶಿಬಿರ ಆಯೋಜಿಸಲಾಗಿತ್ತು. ಪ್ರಾಂಶುಪಾಲ ಶಂಕರ ಖಂಡಿಗೆ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸೀತಾರಾಮ ಭಟ್ ಮುಂಗಿಲ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳು ಶಿಬಿರದ ಪ್ರಯೋಜನ ಪಡೆದುಕೊಂಡರು.





