ಯೋಜನೆಯಡಿಯಲ್ಲಿ, ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಮೂಲಕ 3 ಲಕ್ಷ ರೂ.ವರೆಗೆ ಪಡೆಯುವ ಅಲ್ಪಾವಧಿ ಸಾಲಗಳಿಗೆ ಶೇಕಡಾ 7 ರಿಯಾಯಿತಿ ಬಡ್ಡಿ ದರ ಅನ್ವಯವಾಗುತ್ತದೆ. ಸರ್ಕಾರ ಶೇಕಡಾ 1.5 ರಷ್ಟು ಬಡ್ಡಿ ಸಹಾಯಧನ ನೀಡಲಿದ್ದು, ಸಮಯಕ್ಕೆ ಸರಿಯಾಗಿ ಪಾವತಿಸುವ ರೈತರಿಗೆ ಶೇಕಡಾ 3 ರಷ್ಟು ಹೆಚ್ಚುವರಿ ರಿಯಾಯಿತಿ ದೊರೆಯಲಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು ಎಂದು ಕೇಂದ್ರ ಮಾಹಿತಿ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು.
ಯೋಜನೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಕ್ರಮ ರೈತರಿಗೆ ಬಂಡವಾಳ ಸಹಾಯ ಮಾಡಲಿದಗದು ಕೃಷಿ ಉತ್ಪಾದನೆ ಉತ್ತೇಜಿಸಲು ನೆರವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

