HEALTH TIPS

Breaking: 200ಕ್ಕೂ ಹೆಚ್ಚು ಪ್ರಯಾಣಿಕರಿದ್ದ ವಿಮಾನ ಅಹಮದಾಬಾದ್‌ನಲ್ಲಿ ಪತನ

ಅಹಮದಾಬಾದ್‌: ಗುಜರಾತ್‌ನ ಅಹಮದಾಬಾದ್‌ ವಿಮಾನ ನಿಲ್ದಾಣದಲ್ಲಿ ಟೇಕ್‌ ಆಫ್‌ ಆದ ಕೆಲವೇ ಹೊತ್ತಿನಲ್ಲಿ ಏರ್‌ ಇಂಡಿಯಾ ವಿಮಾನ 'AI-171' ಪತನವಾಗಿದೆ.

242 ಪ್ರಯಾಣಿಕರಿದ್ದ ಈ ವಿಮಾನವು ಅಹಮದಾಬಾದ್‌ನಿಂದ ಇಂಗ್ಲೆಂಡ್‌ನ ಲಂಡನ್‌ನ ಗ್ಯಾಟ್‌ವಿಕ್‌ಗೆ ತೆರಳುತ್ತಿತ್ತು ಎಂದು ಮೂಲಗಳು ತಿಳಿಸಿವೆ.

ವಿಮಾನ ಪತನಗೊಂಡಿರುವ ಮೇಘನಿನಗರ್‌ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಗುಜರಾತ್‌ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ ಅವರು ವಿಮಾನದಲ್ಲಿದ್ದರು ಎನ್ನಲಾಗುತ್ತಿದೆ. ಆದಾಗ್ಯೂ, ಎಷ್ಟು ಪ್ರಯಾಣಿಕರಿದ್ದರು, ದುರಂತದಲ್ಲಿ ಸಂಭವಿಸಿರುವ ಸಾವು-ನೋವಿನ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಬೋಯಿಂಗ್ ಕಂಪನಿಗೆ ಸೇರಿದ 787 ಡ್ರೀಮ್‌ಲೈನರ್‌ ವಿಮಾನ ಇದಾಗಿದ್ದು, ಒಟ್ಟು 300 ಪ್ರಯಾಣಿಕರನ್ನು ಹೊತ್ತೊಯ್ಯುವ ಸಾಮರ್ಥ್ಯ ಇದರದ್ದು.

ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು ತನಿಖೆಗೆ ಆದೇಶಿಸಿದೆ. ಬೋಯಿಂಗ್‌ ಕಂಪನಿಯ ತಾಂತ್ರಿಕ ಅಧಿಕಾರಿಗಳೂ ಸ್ಥಳಕ್ಕೆ ಧಾವಿಸುವ ಸಾಧ್ಯತೆಗಳಿವೆ.

ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಅವರು ವಿಚಾರ ತಿಳಿಯುತ್ತಿದ್ದಂತೆ ನಿಲ್ದಾಣಕ್ಕೆ ಧಾವಿಸಿದ್ದಾರೆ. ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ಪಟೇಲ್‌ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಕೇಂದ್ರ ಸರ್ಕಾರವು, ರಕ್ಷಣಾ ಕಾರ್ಯಾಚರಣೆಗೆ ಅಗತ್ಯ ನೆರವಿನ ಭರವಸೆ ನೀಡಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ...

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries