HEALTH TIPS

Manipur Flood | ಮಣಿಪುರದಲ್ಲಿ ಪ್ರವಾಹ ಪರಿಸ್ಥಿತಿ; 19 ಸಾವಿರ ಜನರಿಗೆ ಸಂಕಷ್ಟ

ಇಂಫಾಲ: ಮಣಿಪುರದಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಧಾರಕಾರ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಸುಮಾರು 19 ಸಾವಿರಕ್ಕೂ ಅಧಿಕ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿವೆ.ಪ್ರವಾಹ ಪರಿಸ್ಥಿತಿ ಜತೆಗೆ ಭೂಕುಸಿತಗಳು ಸಂಭವಿಸಿವೆ ಎಂದು ವರದಿಯಾಗಿದೆ.

ಪ್ರವಾಹದಿಂದ ಸುಮಾರು 3,365 ಮನೆಗಳು ಹಾನಿಗೆ ಒಳಗಾಗಿದ್ದು, 19,811 ಮಂದಿ ತೊಂದರೆಗೀಡಾಗಿದ್ದಾರೆ.

ಪೂರ್ವ ಇಂಫಾಲ ಜಿಲ್ಲೆಯಲ್ಲಿ ಇರಿಲ್ ನದಿಯು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಹೀಂಗಾಂಗ್, ವಾಂಗ್ಖೈ ಮತ್ತು ಖುರೈ ಸೇರಿದಂತೆ ಸೇನಾಪತಿ ಜಿಲ್ಲೆಯಯಲ್ಲಿ ಹೆಚ್ಚು ಹಾನಿಯಾಗಿರುವ ಬಗ್ಗೆ ವರದಿಯಾಗಿದ್ದು. ಪುನರ್ವಸತಿ ಶಿಬಿರಗಳನ್ನು ತೆರಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪೂರ್ವ ಇಂಫಾಲದ ಚೆಕಾನ್‌ನಲ್ಲಿ ನದಿ ಉಕ್ಕಿ ಹರಿಯುತ್ತಿದ್ದು ಆಲ್ ಇಂಡಿಯಾ ರೆಡಿಯೊ, ಸರ್ಕಾರಿ ಜವಾಹರಲಾಲ್ ನೆಹರು ವೈದ್ಯಕೀಯ ವಿಜ್ಞಾನ ಸಂಸ್ಥೆ ಸೇರಿದಂತೆ ಹಲವಾರು ಕಚೇರಿಗಳು, ಸಂಸ್ಥೆಗಳ ಆವರಣಗಳು ಸಂಪೂರ್ಣವಾಗಿ ಜಲಾವೃತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ಪ್ರವಾಹ ಪರಿಸ್ಥಿತಿ ಎದುರಾದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಹಲವಾರು ರೋಗಿಗಳನ್ನು ಇತರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು ಇಂಫಾಲದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಪೂರ್ವ ಇಂಫಾಲದಲ್ಲಿ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿನ ಸುಮಾರು 800 ಜನರನ್ನು ಸೇನೆ ಮತ್ತು ಅಸ್ಸಾಂ ರೈಫಲ್ಸ್ ಸಿಬ್ಬಂದಿ ರಕ್ಷಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಲೋಕಸಭಾ ಸಂಸದ ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ಅವರು ಪ್ರವಾಹ ಪರಿಸ್ಥಿತಿಯನ್ನು 'ರಾಜ್ಯ ವಿಪತ್ತು' ಎಂದು ಘೋಷಿಸುವಂತೆ ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.

'ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಜಲಸಂಪನ್ಮೂಲ ಇಲಾಖೆ ವಿಫಲವಾಗಿದೆ ಎಂದು ಮಣಿಪುರ ಕಾಂಗ್ರೆಸ್‌ ಆರೋಪಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries