HEALTH TIPS

Plane Crash | ‌ಊಟ ಮಾಡುತ್ತಿದ್ದ 4 MBBS ವಿದ್ಯಾರ್ಥಿಗಳ ಸಾವು: ವೈದ್ಯರ ಸಂಘ

ನವದೆಹಲಿ: ಅಹಮದಾಬಾದ್‌ನಲ್ಲಿ ಸಂಭವಿಸಿದ್ದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಬಿ.ಜೆ ಮೆಡಿಕಲ್‌ ಕಾಲೇಜಿನ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಬಿ.ಜೆ. ವೈದ್ಯಕೀಯ ಕಾಲೇಜಿನ ಕಿರಿಯ ವೈದ್ಯರ ಸಂಘ (ಜೆಡಿಎ) ಖಚಿತಪಡಿಸಿದೆ. 

2023ನೇ ಬ್ಯಾಚ್‌ನ ಜಯಪ್ರಕಾಶ್ ಚೌಧರಿ, ರಾಕೇಶ್ ದಿಹೋರಾ ಹಾಗೂ 2024ನೇ ಬ್ಯಾಚ್‌ನ ಆರ್ಯನ್ ರಜಪೂತ್, ಮಾನವ್ ಬಾದು ಎಂಬುವವರು ಮೃತಪಟ್ಟಿದ್ದಾರೆ.

ಅವಘಡದಲ್ಲಿ ಇತರೆ 20 ಎಂಬಿಬಿಎಸ್ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆ ಪೈಕಿ 11 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜೆಡಿಎ ಪ್ರಕಟಣೆಯಲ್ಲಿ ತಿಳಿಸಿದೆ.

ವಿಮಾನ ದುರಂತದಲ್ಲಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರು ಮೃತಪಟ್ಟಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಈ ರೀತಿಯ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ವೈದ್ಯರ ಸಂಘ ಮನವಿ ಮಾಡಿದೆ.

'ಅತುಲ್ಯಂ' ಕಟ್ಟಡದಲ್ಲಿ ವಾಸಿಸುತ್ತಿದ್ದ ಸೂಪರ್ ಸ್ಪೆಷಾಲಿಟಿ ವೈದ್ಯರ ಕುಟುಂಬದ ನಾಲ್ವರು ಸದಸ್ಯರು ಸಹ ಸಾವಿಗೀಡಾಗಿದ್ದಾರೆ ಎಂದು ವೈದ್ಯರ ಸಂಘ ವಿವರಿಸಿದೆ.

ಗುರುವಾರ ಮಧ್ಯಾಹ್ನ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನವು ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು, ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ ಸೇರಿದಂತೆ ಕನಿಷ್ಠ 270 ಮಂದಿ ಮೃತಪಟ್ಟಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries