ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಪೈಕಿ 47 ಜನರ ಗುರುತನ್ನು ಡಿಎನ್‌ಎ ಪರೀಕ್ಷೆ ಮೂಲಕ ಪತ್ತೆ ಮಾಡಲಾಗಿದ್ದು, 24 ಶವಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ದುರಂತದಲ್ಲಿ ಮೃತಪಟ್ಟವರ ದೇಹಗಳು ಛಿದ್ರವಾಗಿದ್ದು, ಗುರುತು ಪತ್ತೆಗಾಗಿ ಡಿಎನ್‌ಎ ಪರೀಕ್ಷೆಗೆ ಕಳುಹಿಸಲಾಗಿತ್ತು.
ಡಿಎನ್‌ಎ ಪರೀಕ್ಷೆ ಮೂಲಕ ಗುರುತು ಪತ್ತೆಯಾಗಿರುವ ಬಹುಪಾಲು ಮೃತರು ರಾಜಸ್ಥಾನ ಹಾಗೂ ಗುಜರಾತ್ ಮೂಲದವರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಗುರುವಾರ ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದ ವಿಮಾನವು ಟೇಕಾಫ್ ಆಗುವಾಗ ಪತನಗೊಂಡಿತ್ತು. ದುರಂತದಲ್ಲಿ ವಿಮಾನದಲ್ಲಿದ್ದ 241 ಪ್ರಯಾಣಿಕರು ಸೇರಿದಂತೆ 270ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.




