HEALTH TIPS

Plane Crash: ತನಿಖಾಧಿಕಾರಿ ನೇಮಕ ಮಾಡದ AAIB; ಅಕ್ಷಮ್ಯ ಅಪರಾಧ: ಕಾಂಗ್ರೆಸ್

ನವದೆಹಲಿ: ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ದುರಂತಕ್ಕೀಡಾಗಿ ಎರಡು ವಾರ ಕಳೆದರೂ ಇಲ್ಲಿಯವರೆಗೆ ಮುಖ್ಯ ತನಿಖಾಧಿಕಾರಿಯನ್ನು ನೇಮಕ ಮಾಡದೇ ಇರುವುದು ಅಕ್ಷಮ್ಯ ಅಪರಾಧ ಎಂದು ಕಾಂಗ್ರೆಸ್ ಆರೋಪಿಸಿದೆ. 

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್, ಪೋಸ್ಟ್ ಮಾಡಿದ್ದಾರೆ.

'ಅಹಮದಾಬಾದ್‌ನಲ್ಲಿ ಭೀಕರ ವಿಮಾನ ದುರಂತ ಸಂಭವಿಸಿ ಹದಿನೈದು ದಿನಗಳು ಕಳೆದರೂ ವಿಮಾನ ಅಪಘಾತ ತನಿಖಾ ಸಂಸ್ಥೆಯು (ಎಎಐಬಿ) ಇನ್ನೂ ಮುಖ್ಯ ತನಿಖಾಧಿಕಾರಿಯನ್ನು ನೇಮಕ ಮಾಡಿಲ್ಲ ಎಂದು ವರದಿಯಾಗಿದೆ. ಇದು ಅಕ್ಷಮ್ಯ ಅಪರಾಧ' ಎಂದು ಹೇಳಿದ್ದಾರೆ.

ಈ ಸಂಬಂಧ ವಿಮಾನ ಅಪಘಾತ ತನಿಖಾ ಸಂಸ್ಥೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಜೂನ್‌ 12ರಂದು ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ 'ಏರ್‌ ಇಂಡಿಯಾ' ಸಂಸ್ಥೆಯ ವಿಮಾನ ಟೆಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಸಮೀಪದ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ ಕಟ್ಟಡದ ಮೇಲೆ ಪತನಗೊಂಡಿತ್ತು.

ಈ ದುರಂತದಲ್ಲಿ ವಿಮಾನದಲ್ಲಿದ್ದ 242 ಪ್ರಯಾಣಿಕರ ಪೈಕಿ 241 ಮಂದಿ ಸೇರಿದಂತೆ 270 ಮಂದಿ ಮೃತಪಟ್ಟಿದ್ದರು. ಓರ್ವ ಪ್ರಯಾಣಿಕ ಪವಾಡ ಸದೃಶ ಪಾರಾಗಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries