ನವದೆಹಲಿ: ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
'ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ದುರಂತವು ನಮ್ಮನ್ನು ದಿಗ್ಭ್ರಮೆಗೊಳಿಸಿದೆ. ಇದು ಪದಗಳಿಗೆ ಮೀರಿದ ಹೃದಯವಿದ್ರಾವಕ ಘಟನೆಯಾಗಿದೆ.
ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುವ ಬಗ್ಗೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ' ಎಂದು ಮೋದಿ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
ಗುಜರಾತ್‌ನ ಅಹಮದಾಬಾದ್‌ನಿಂದ ಇಂಗ್ಲೆಂಡ್‌ನ ಲಂಡನ್‌ನ ಗ್ಯಾಟ್‌ವಿಕ್‌ಗೆ ಪ್ರಯಾಣ ಆರಂಭಿಸಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಪತನಗೊಂಡಿದೆ.
AI-171 ವಿಮಾನವು ಮೇಘಾನಿನಗರ್ ಪ್ರದೇಶದಲ್ಲಿ ಇಂದು (ಗುರುವಾರ) ಮಧ್ಯಾಹ್ನ 1.40ರ ಸುಮಾರಿಗೆ ಪತನಗೊಂಡಿದೆ.
ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 242 ಪ್ರಯಾಣಿಕರು ದುರಂತಕ್ಕೀಡಾದ ವಿಮಾನದಲ್ಲಿ ಇದ್ದರು ಎನ್ನಲಾಗುತ್ತಿದೆ. ಆದರೆ, ಅಧಿಕೃತ ಮಾಹಿತಿ ಇನ್ನೂ ಲಭ್ಯವಾಗಿಲ್ಲ.




