ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಕಾಲ್ತುಳಿತಕ್ಕೆ ಸರ್ಕಾರವೇ ಹೊಣೆ. ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಬಿಜೆಪಿಯ ಹಲವು ನಾಯಕರು ಒತ್ತಾಯಿಸಿದ್ದಾರೆ.
ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೋತ್ಸವದ ವೇಳೆ ನಿರೀಕ್ಷೆ ಮೀರಿ ಜನರು ಬಂದಿದ್ದಾರೆ.
ಕಾಲ್ತುಳಿತಕ್ಕೆ ಸಿಲುಕಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಕೆಲವರು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಇಂತಹ ದುರಂತಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣಬಸವರಾಜ ಬೊಮ್ಮಾಯಿ, ಸಂಸದಪೂರ್ವಸಿದ್ಧತೆ ಮಾಡಿಕೊಳ್ಳದೆ ಅವಸರದಲ್ಲಿ ಎರಡು ಕಾರ್ಯಕ್ರಮ ಆಯೋಜನೆ ಮಾಡಿದ್ದು, ದೊಡ್ಡ ಸಂಖ್ಯೆಯಲ್ಲಿ ಜನರು ಸೇರಲು ಅವಕಾಶ ಮಾಡಿಕೊಟ್ಟಿದ್ದು ದುರಂತಕ್ಕೆ ಕಾರಣ. ಘಟನೆ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕುಆರ್. ಅಶೋಕ, ವಿಧಾನಸಭೆ ವಿರೋಧ ಪಕ್ಷದ ನಾಯಕಸರಿಯಾದ ಪೂರ್ವಸಿದ್ಧತೆ ಇಲ್ಲದೆ, ಯೋಜನೆ ಇಲ್ಲದೆ, ಪೊಲೀಸರಿಗೆ ಸಮಯ ಕೊಡದೆ ಅಭಿನಂದನಾ ಸಮಾರಂಭ ನಡೆಸಲು ರಾಜ್ಯ ಸರ್ಕಾರ ದುಂಬಾಲು ಬಿದ್ದಿದ್ದೆ ಈ ಅನಾಹುತಕ್ಕೆ ಕಾರಣ
ದುರ್ಘಟನೆಗೆ ಸರ್ಕಾರವೇ ಹೊಣೆ - ಸಿಪಿಐ(ಎಂ) ಆರೋಪ
ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ: ಸಿದ್ದರಾಮಯ್ಯ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಕಾರ್ಯದರ್ಶಿಚಿನ್ನಸ್ವಾಮಿ ಕ್ರೀಡಾಂಗಣದ ಹೊರಗಡೆ ಕಾಲ್ತುಳಿತದಲ್ಲಿ ಅಭಿಮಾನಿಗಳ ಸಾವು ಸಂಭವಿಸಿದ್ದು 'ದುರದೃಷ್ಟಕರ'. ಆರ್‌ಸಿಬಿಯ ಐಪಿಎಲ್ ವಿಜಯೋತ್ಸವ ಕಾರ್ಯಕ್ರಮಕ್ಕೆ ಸೂಕ್ತ ರೀತಿಯಲ್ಲಿ ಯೋಜನೆ ರೂಪಿಸಿಕೊಳ್ಳಬೇಕಿತ್ತು.
ವಿಧಾನಸೌಧದಲ್ಲಿ ಮೆಟ್ರೊ ಗೇಟ್ ತೆರೆದ ಬಿಎಂಆರ್‌ಸಿಎಲ್
ಜನಸಂದಣಿ ನಿಯಂತ್ರಿಸಲು ವಿಧಾನಸೌಧ ಮತ್ತು ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣದಲ್ಲಿ ಮೆಟ್ರೊ ನಿಲುಗಡೆಯನ್ನು ಸಂಜೆ 4.30ರಿಂದ ಸ್ಥಗಿತಗೊಳಿಸಲಾಗಿತ್ತು. ರಾತ್ರಿ 7.20ರಿಂದ ವಿಧಾನಸೌಧದಲ್ಲಿ ನಿಲುಗಡೆ ನೀಡಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಬೌರಿಂಗ್ ಹಾಗೂ ವೈದೇಹಿ ಆಸ್ಪತ್ರೆಗೆ ಸಿಎಂ ಭೇಟಿ
ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ: ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ, ಮುಖ್ಯಮಂತ್ರಿಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ.
ಅಭಿಮಾನ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ: ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿಆರ್‌ಸಿಬಿಯ ಐಪಿಎಲ್ ಗೆಲುವಿನ ಸಂಭ್ರಮಾಚರಣೆಗೆ ಸಾಕ್ಷಿಯಾಗಬೇಕಿದ್ದ ಜನರು ದುರಂತಕ್ಕೆ ಒಳಗಾಗಿ, ಮೃತಪಟ್ಟಿರುವುದು ತೀವ್ರ ನೋವು ಮತ್ತು ಆಘಾತ ತಂದಿದೆ. ಮೃತರಿಗೆ ನನ್ನ ಸಂತಾಪಗಳು. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು. ಅಭಿಮಾನ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಳ್ಳುತ್ತೇನೆ.
ಬೆಂಗಳೂರಿನ ಎಂ.ಜಿ. ರಸ್ತೆ ಮೆಟ್ರೊ ನಿಲ್ದಾಣ ಬಂದ್
ಬೆಂಗಳೂರು: ವಿಪರೀತ ಜನಸಂದಣಿಯನ್ನು ನಿಯಂತ್ರಿಸಲಾರದೇ ಮಹಾತ್ಮಗಾಂಧಿ ರಸ್ತೆ ಮೆಟ್ರೊ ನಿಲ್ದಾಣದ ಪ್ರವೇಶದ್ವಾರದ ಶಟರ್ ಎಳೆಯಲಾಯಿತು.
ನಿಲ್ದಾಣದ ಒಳಗೆ ಹೋಗಿರುವ ಪ್ರಯಾಣಿಕರೆಲ್ಲರೂ ಮೆಟ್ರೊ ಹತ್ತಿದ ಮೇಲೆ ಒಮ್ಮೆ ಶಟರ್ ತೆಗೆದು ಎರಡೇ ನಿಮಿಷದಲ್ಲಿ ಮತ್ತೆ ಬಂದ್ ಮಾಡಲಾಗುತ್ತಿತ್ತು. ಅಷ್ಟು ಹೊತ್ತಿಗೆ ಮೂರು ನಾಲ್ಕು ರೈಲು ತುಂಬುವಷ್ಟು ಜನರು ಒಳಗೆ ನುಗ್ಗುತ್ತಿದ್ದರು.
ಪ್ರವೇಶದ್ವಾರದ ಮುಂದೆ ಸಾವಿರಾರು ಜನರು ಒಮ್ಮೆಲೇ ಸೇರುತ್ತಿರುವುದರಿಂದ ಪೊಲೀಸರು ನಿಯಂತ್ರಿಸಲು ಪರದಾಡಿದರು. ಟ್ರಿನಿಟಿ ನಿಲ್ದಾಣಕ್ಕೆ ಕಳುಹಿಸಿದರು.
ವಿಧಾನಸೌಧ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳನ್ನು ಬಂದ್ ಮಾಡಿರುವುದರಿಂದ ಎಂ.ಜಿ. ರಸ್ತೆ ಮೆಟ್ರೊ ನಿಲ್ದಾಣ ತುಂಬಿ ತುಳುಕುವಂತಾಯಿತು.

ಭಾರಿ ಸಂಖ್ಯೆಯಲ್ಲಿ ಸೇರಿದ ಅಭಿಮಾನಿಗಳು, ಪೊಲೀಸರಿಂದ ಜನರನ್ನು ನಿಯಂತ್ರಿಸಲು ಹರಸಾಹಸ
ಸಾವಿನ ಸಂಖ್ಯೆ 11ಕ್ಕೆ ಏರಿಕೆ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿದೆ. ಇನ್ನೂ ಹಲವರು ಅಸ್ವಸ್ಥರಾಗಿದ್ದು, ಅವರಿಗೆ ಬೌರಿಂಗ್ ಹಾಗೂ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ.
ವೈದೇಹಿ ಆಸ್ಪತ್ರೆಯಲ್ಲಿ ನಾಲ್ಕು ಸಾವು
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಕ್ಟರಿ ಪರೇಡ್ ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದು ವೈದೇಹಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಒಟ್ಟು 16 ಜನರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಇದರಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಎಲ್ಲರೂ 18 ರಿಂದ 22 ವಯಸ್ಸಿನವರು. ಮೃತಪಟ್ಟವರಲ್ಲಿ ಮೂರು ಮಂದಿ ಯುವಕರು, ಒಬ್ಬಳು ಯುವತಿ ಇದ್ದಾರೆ. ಇಬ್ಬರು ಗುರುತು ಪತ್ತೆಯಾಗಿದ್ದು, ಇನ್ನೂ ಇಬ್ಬರ ಗುರುತು ಪತ್ತೆ ಆಗಿಲ್ಲ.12ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಹೇಳಿದರು.

ಈ ಮಹಾದುರಂತಕ್ಕೆ ಸರ್ಕಾರವೇ ನೇರ ಹೊಣೆ: ಕುಮಾರಸ್ವಾಮಿ
ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಸರ್ಕಾರ ಸರಕಾರವೇ ಹೊತ್ತುಕೊಳ್ಳಬೇಕು.

ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಲೂ ಟ್ರಾಫಿಕ್ ಜಾಮ್
ಮೆಟ್ರೊ ನಿಲುಗಡೆ ಸ್ಥಗಿತಗೊಳಿಸಿದ ಬಿಎಂಆರ್‌ಸಿಎಲ್
ಬೆಂಗಳೂರು: ಐಪಿಎಲ್ ಗೆದ್ದಿರುವ ಆರ್‌ಸಿಬಿ ತಂಡದ ಅಭಿನಂದನೆಗಾಗಿ ಚಿನ್ನಸ್ವಾಮಿ ಕ್ರೀಡಾಂಗಣ ಮತ್ತು ವಿಧಾನಸೌಧಕ್ಕೆ ಬರುವವರ ಸಂಖ್ಯೆ ವಿಪರೀತವಾಗಿದ್ದರಿಂದ ವಿಧಾನಸೌಧ ಮತ್ತು ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣಗಳಲ್ಲಿ ರೈಲು ನಿಲುಗಡೆಯನ್ನು ಬಿಎಂಆರ್‌ಸಿಎಲ್ ಸ್ಥಗಿತಗೊಳಿಸಿದೆ.




