ಮಂಜೇಶ್ವರ: ವಿಶ್ವಹಿಂದೂ ಪರಿಷತ್ ಮಾತೃ ಮಂಡಳಿ ಉಪಖಂಡ ಸಮಿತಿ ಸಂತಡ್ಕ ಇದರ ವತಿಯಿಂದ ಇಪ್ಪತ್ತೆರಡನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆ ಆ. 08 ರಂದು ಶುಕ್ರವಾರ ಬೆಳಿಗ್ಗೆ 8.30ಕ್ಕೆ ಸಂತಡ್ಕದ ಅರಸು ಸಂಕಲ ಭವನ ಅರಸು ಸಂಕಲ ದೈವ ಕ್ಷೇತ್ರದಲ್ಲಿ ವೇದಮೂರ್ತಿ ಕುರಿಯ ರಾಮಮೂರ್ತಿಯವರ ದಿವ್ಯ ಹಸ್ತದಿಂದ ಜರಗಲಿದೆ.
ಈ ಸಂದರ್ಭ ನಡೆಯಲಿರುವ ಧಾರ್ಮಿಕ ಸಭೆಯಲ್ಲಿ ಸಂತಡ್ಕ ಶ್ರೀಅರಸು ಸಂಕಲ ದೈವಕ್ಷೇತ್ರದ ಅಧ್ಯಕ್ಷ ಡಾ. ಶ್ರೀಧರ ಭಟ್ ಅಧ್ಯಕ್ಷತೆ ವಹಿಸುವರು. ಬ್ಲಾ.ಪಂ. ಸದಸ್ಯೆ ಅಶ್ವಿನಿ ಎಂ.ಎಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಿಶ್ವ ಹಿಂದು ಪರಿಷತ್ ಕಾಸರಗೋಡು ಜಿಲ್ಲಾ ಬಾಲ ಸಂಸ್ಕಾರ ಪ್ರಮುಖ್ ಸೌಮ್ಯ ಪ್ರಕಾಶ್ ಮದಂಗಲ್ಲುಕಟ್ಟೆ ಧಾರ್ಮಿಕ ಉಪನ್ಯಾಸ ನೀಡುವರು. ಮಧ್ಯಾಹ್ನ ಅನ್ನ ಸಂತರ್ಪಣೆ ಜರಗಲಿದೆ ಎಂದು ಕೇತ್ರ ಪ್ರಕಟಣೆ ತಿಳಿಸಿದೆ.




