HEALTH TIPS

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ; ಆರು ತಿಂಗಳಲ್ಲಿ 26 ಸಾವಿರ ಜನ ಸಾವು: ಗಡ್ಕರಿ

ನವದೆಹಲಿ: ಈ ವರ್ಷದಲ್ಲಿ ಜನವರಿಯಿಂದ-ಜೂನ್‌ವರೆಗೆ ಆರು ತಿಂಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸಿದ ಅಪಘಾತಗಳಲ್ಲಿ 26,770 ಜನ ಮೃತಪಟ್ಟಿದ್ದಾರೆ ಎಂದು ಸರ್ಕಾರ ರಾಜ್ಯ ಸಭೆಗೆ ತಿಳಿಸಿದೆ.

ಈ ಕುರಿತು ಲಿಖಿತ ರೂಪದಲ್ಲಿ ಉತ್ತರ ನೀಡಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, 2024ರಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸಿದ ಅಪಘಾತಗಳಲ್ಲಿ 52,609 ಜನ ಮೃತಪಟ್ಟಿದ್ದರು ಎಂದು ತಿಳಿಸಿದ್ದಾರೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ‌ಹೆಚ್ಚಿನ ವಾಹನ ದಟ್ಟಣೆ ಇರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮತ್ತು ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇ, ಟ್ರಾನ್ಸ್-ಹರಿಯಾಣ, ಪೂರ್ವ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇ, ದೆಹಲಿ- ಮುಂಬೈ ಎಕ್ಸ್‌ಪ್ರೆಸ್‌ವೇಯಂತಹ ರಾಷ್ಟ್ರೀಯ ಎಕ್ಸ್‌ಪ್ರೆಸ್‌ವೇಗಳಲ್ಲಿ ಸುಧಾರಿತ ಸಂಚಾರ ನಿರ್ವಹಣಾ ವ್ಯವಸ್ಥೆ (ಎಟಿಎಂಎಸ್‌) ಅನ್ನು ಸ್ಥಾಪಿಸಿದೆ ಎಂದು ಮಾಹಿತಿ ನೀಡಿದರು.

ಎಟಿಎಂಎಸ್‌ನಿಂದ ಹೆದ್ದಾರಿ ಪ್ರದೇಶಗಳಲ್ಲಿ ಸಂಭವಿಸುವ ಅಪಘಾತಗಳನ್ನು ತ್ವರಿತವಾಗಿ ಗುರುತಿಸುವುದು ಮತ್ತು ಹೆದ್ದಾರಿಗಳನ್ನು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡುವುದು ಸುಲಭವಾಗುತ್ತದೆ. ಇದರಿಂದಾಗಿ ಅಗತ್ಯ ಸಂದರ್ಭಗಳಲ್ಲಿ ಸ್ಥಳದಲ್ಲೇ ನೆರವನ್ನು ನೀಡಬಹುದು. ಸಾಮಾನ್ಯವಾಗಿ ಹೆಚ್ಚು ವಾಹನಗಳು ಸಂಚರಿಸುವ ಹೆದ್ದಾರಿಗಳಲ್ಲಿ ಮತ್ತು ಎನ್‌ಎಚ್‌ಎಐಗಳ ಹೈ ಸ್ಪೀಡ್ ಕಾರಿಡಾರ್‌ಗಳ ಯೋಜನೆಗಳಲ್ಲಿ ಎಟಿಎಂಎಸ್‌ ಅಳವಡಿಕೆ ಒಳಗೊಂಡಿರುತ್ತದೆ ಎಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries