ಕಾಸರಗೋಡು: ಕಾರಿನಲ್ಲಿ ಸಾಗಿಸುತ್ತಿದ್ದ4.830ಕಿ.ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಅಡಿಶನಲ್ ಡಿಸ್ಟ್ರಿಕ್ಟ್ ಮತ್ತು ಜಿಲ್ಲಾ ಸೆಶನ್ಸ್ ನ್ಯಾಯಾಲಯ(ದ್ವಿತೀಯ)ದ ನ್ಯಾಯಾಧೀಶೆ ಕೆ. ಪ್ರಿಯಾ ಅವರು, ಪ್ರಕರಣದ ಎರಡನೇ ಆರೋಪಿ ಪಟ್ಲ ನಿವಾಸಿ ಅಬ್ದುಲ್ ರಾವುಫ್ ಎಂಬಾತನಿಗೆ ಎರಡು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 30ಸಾವಿರ ರೂ.ದಂಡ ವಿಧಿಸಿ ತೀರ್ಪಿತ್ತಿದ್ದಾರೆ.
ದಂಡ ಪಾವತಿಸದಿದ್ದಲ್ಲಿ ಆರೋಪಿ ಮೂರು ತಿಂಗಳ ಹೆಚ್ಚಿನ ಜೈಲು ಶಿಕ್ಷೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಲಾಗಿದೆ. ಪ್ರಕರಣದ ಒಂದನೇ ಆರೋಪಿಗೆ ಈ ಹಿಂದೆ ಶಿಕ್ಷೆ ವಿಧಿಸಲಾಗಿದೆ. 2015 ನ. 29ರಂದು ತಡರಾತ್ರಿ ಸೀತಾಂಗೋಳಿಯಲ್ಲಿ ಬದಿಯಡ್ಕ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ ಗಾಂಜಾ ವಶಪಡಿಸಿ, ಆರೋಪಿಗಳನ್ನು ಬಂಧಿಸಲಾಗಿತ್ತು.


