HEALTH TIPS

ದೇಶದಲ್ಲಿ 3,104 ಕಳಪೆ ಔಷಧ ಪತ್ತೆ: ಜೆ.ಪಿ. ನಡ್ಡಾ ಮಾಹಿತಿ

ನವದೆಹಲಿ: 2024ರ ಏಪ್ರಿಲ್‌ನಿಂದ 2025ರ ಮಾರ್ಚ್‌ವರೆಗೆ 1,16,323 ಔಷಧ ಮಾದರಿಗಳನ್ನು ಪರೀಕ್ಷಿಸಿದ್ದು, ಈ ಪೈಕಿ 3,104 ಔಷಧಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, 245 ನಕಲಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಮಂಗಳವಾರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, 'ದೇಶದ ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಔಷಧ ನಿಯಂತ್ರಣ ಸಂಸ್ಥೆಗಳಿಂದ ಪಡೆದ ಮಾಹಿತಿ ಪ್ರಕಾರ, ನಕಲಿ/ಕಲಬೆರಕೆ ಔಷಧಗಳ ತಯಾರಿಕೆ, ಮಾರಾಟ ಹಾಗೂ ವಿತರಣೆಗೆ ಸಂಬಂಧಿಸಿದಂತೆ 961 ಪ್ರಕರಣಗಳಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ' ಎಂದಿದ್ದಾರೆ.

'2023ರ ಏಪ್ರಿಲ್‌ನಿಂದ 2024ರ ಮಾರ್ಚ್‌ವರೆಗೆ 1,06,150 ಔಷಧ ಮಾದರಿಗಳ ಪರೀಕ್ಷೆ ನಡೆಸಿದ್ದು, 2,988 ನಿಗದಿತ ಗುಣಮಟ್ಟ ಹೊಂದಿಲ್ಲ. 282 ಔಷಧಗಳು ಕಳಪೆಯಾಗಿವೆ. ಇದೇ ಅವಧಿಯಲ್ಲಿ 604 ಪ್ರಕರಣಗಳಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ' ಎಂದು ಮಾಹಿತಿ ನೀಡಿದ್ದಾರೆ.

ನಕಲಿ, ಕಲಬೆರಕೆ ಹಾಗೂ ಕಳಪೆ ಗುಣಮಟ್ಟದ ಔಷಧಗಳ ತಯಾರಿಕೆಯು ಔಷಧ ಮತ್ತು ಸೌಂದರ್ಯವರ್ಧಕ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಅಧಿಕಾರವಿದೆ ಎಂದು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries