HEALTH TIPS

ತೆಲಂಗಾಣದ ಔಷಧ ಕಾರ್ಖಾನೆಯಲ್ಲಿ ಸ್ಫೋಟ: ಮೃತರ ಸಂಖ್ಯೆ 35ಕ್ಕೇರಿಕೆ

ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ನಗರದ ಔಷಧ ಕಾರ್ಖಾನೆಯಲ್ಲಿ ಸೋಮವಾರ ಸಂಭವಿಸಿದ್ದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಸೇರಿದಂತೆ ಸಚಿವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯ ರಿಯಾಕ್ಟರ್‌ನಲ್ಲಿ ರಾಸಾಯನಿಕ ವಸ್ತುವಿಗೆ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿದೆ ಎಂದು ಮೂಲಗಳು ಹೇಳಿವೆ. ಆದರೆ, ಸ್ಫೋಟಕ್ಕೆ ನಿಖರ ಕಾರಣ ಸಮಗ್ರ ಪರಿಶೀಲನೆಯ ಬಳಿಕವೇ ತಿಳಿಯಲಿದೆ ಎಂದು ತಾಂತ್ರಿಕ ತಜ್ಞರು ತಿಳಿಸಿದ್ದಾರೆ.

'ಸೋಮವಾರ ಬೆಳಿಗ್ಗೆ 9.28ರಿಂದ 9.35ರ ನಡುವೆ ಸ್ಫೋಟ ಸಂಭವಿಸಿತ್ತು. ಈ ವೇಳೆ ಕಾರ್ಖಾನೆಯಲ್ಲಿ 150 ಮಂದಿ ಕೆಲಸ ಮಾಡುತ್ತಿದ್ದರು. ಅದರಲ್ಲಿ ಸುಮಾರು 90 ಮಂದಿ ಸ್ಫೋಟ ನಡೆದ ಸ್ಥಳದ ಸಮೀಪದಲ್ಲೇ ಇದ್ದರು' ಎಂದು ಕಾರ್ಖಾನೆಯ ಮೂಲಗಳನ್ನು ಉಲ್ಲೇಖಿಸಿ ಐಜಿಪಿ ವಿ.ಸತ್ಯನಾರಾಯಣ ಹೇಳಿದ್ದರು.

ಸತ್ತವರಲ್ಲಿ ಕೆಲವರ ಮೃತದೇಹ ಸಂಪೂರ್ಣ ಸುಟ್ಟುಹೋಗಿದ್ದು, ಗುರುತು ಪತ್ತೆಹಚ್ಚಲು ಡಿಎನ್‌ಎ ಪರೀಕ್ಷೆ ನಡೆಸಲಾಗುವುದು ಎಂದಿದ್ದಾರೆ.

ಸ್ಫೋಟದಿಂದ ಬೆಂಕಿ ಹಾಗೂ ದಟ್ಟ ಹೊಗೆ ಎದ್ದಿದೆ. ಅಗ್ನಿಶಾಮಕ ದಳದ 10 ವಾಹನಗಳನ್ನು ಬಳಸಿ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಸ್ಫೋಟದ ಸದ್ದು 5 ಕಿ.ಮೀ. ದೂರದವರೆಗೂ ಕೇಳಿಸಿದ್ದು, ಕಟ್ಟಡದ ಒಂದು ಭಾಗ ಕುಸಿದುಬಿದ್ದಿದೆ. ಸ್ಥಳೀಯ ಪೊಲೀಸರು, ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು.

'ಕಾರ್ಖಾನೆಯ ಡ್ರೈಯಿಂಗ್ ಘಟಕದಲ್ಲಿ ಒತ್ತಡ ಹೆಚ್ಚಾಗಿ ಸ್ಫೋಟ ಸಂಭವಿಸಿರುವ ಸಾಧ್ಯತೆಯಿದೆ ಇದೆ' ಎಂದು ತೆಲಂಗಾಣ ರಾಜ್ಯ ವಿಕೋಪ ನಿರ್ವಹಣೆ ಮತ್ತು ಅಗ್ನಿಶಾಮಕ ಸೇವೆಗಳ ನಿರ್ದೇಶಕ ವೈ.ನಾಗಿ ರೆಡ್ಡಿ ತಿಳಿಸಿದ್ದಾರೆ.

₹2 ಲಕ್ಷ ಪರಿಹಾರ: ಪ್ರಧಾನಿ ನರೇಂದ್ರ ಮೋದಿ ಅವರು ದುರಂತಕ್ಕೆ ಶೋಕ ವ್ಯಕ್ತಪಡಿಸಿದ್ದು, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹ 50 ಸಾವಿರ ನಗದು ಪರಿಹಾರ ಘೋಷಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries