HEALTH TIPS

ಈಶಾನ್ಯ ರಾಜ್ಯಗಳಲ್ಲಿ ಮಳೆ, ಪ್ರವಾಹ |3,800ಕ್ಕೂ ಹೆಚ್ಚು ಜನರನ್ನು ರಕ್ಷಿಸಿದ ಸೇನೆ

ಗುವಾಹಟಿ: ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಸಂಭವಿಸಿದ ಭೀಕರ ಪ್ರವಾಹದಿಂದಾಗಿ ಸಾವಿರಾರು ಕುಟುಂಬಗಳು ನಿರಾಶ್ರಿತವಾಗಿವೆ. ಇದರ ಬೆನ್ನಲ್ಲೇ ಭಾರತೀಯ ಸೇನೆಯು ಮಾನವೀಯ ನೆರವು ಹಾಗೂ ವಿಪತ್ತು ಪರಿಹಾರ (ಎಚ್‌ಎಡಿಆರ್‌) ಕಾರ್ಯಾಚರಣೆ ಪ್ರಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈಶಾನ್ಯ ರಾಜ್ಯಗಳಾದ ಉತ್ತರಾಖಂಡ, ನಾಗಾಲ್ಯಾಂಡ್, ಅಸ್ಸಾಂ ಮತ್ತು ಮಣಿಪುರದಾದ್ಯಂತ 40 ಪರಿಹಾರ ತಂಡಗಳನ್ನು ನಿಯೋಜಿಸಿದ್ದು, ಸ್ಥಳೀಯ ಆಡಳಿತದ ಸಹಯೋಗದೊಂದಿಗೆ ಆಪರೇಷನ್ ಜಲ ರಹತ್-2 ಅಡಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು, ಈವರೆಗೆ ಒಟ್ಟು 3,820 ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ಸೇನೆ ಪ್ರಕಟಣೆಯಲ್ಲಿ ತಿಳಿಸಿದೆ.

ಸೇನೆಯು ಸಂತ್ರಸ್ತರಿಗೆ 1,361 ಆಹಾರ ಪೊಟ್ಟಣ, 15,421 ನೀರಿನ ಬಾಟಲಿಗಳನ್ನು ವಿತರಿಸಲಾಗಿದೆ. ಜತೆಗೆ, 2,095 ಜನರಿಗೆ ವೈದ್ಯಕೀಯ ನೆರವು ನೀಡಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಸದ್ಯ ನೀರಿನ ಮಟ್ಟ ಕಡಿಮೆಯಾಗುತ್ತಿದ್ದರೂ, ಭಾರತೀಯ ಸೇನೆಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಲೇ ಇದೆ. ಅಗತ್ಯವಿದ್ದಲ್ಲಿ ನೆರವಿಗೆ ಧಾವಿಸಲು ಸಿದ್ಧವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries