ಢಾಕಾ: ಬಾಂಗ್ಲಾದೇಶದ ನ್ಯಾಷನಲ್ ಸಿಟಿಜನ್ ಪಾರ್ಟಿಯ (ಎಸಿಪಿ) ರ‍್ಯಾಲಿಯ ವೇಳೆ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಬೆಂಬಲಿಗರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದು, ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಬಾಂಗ್ಲಾದೇಶದ ಸಂಸ್ಥಾಪಕ ಶೇಖ್ ಮುಜೀಬುರ್ ರೆಹಮಾನ್ ಅವರ ತವರು ಪಟ್ಟಣವಾದ ಗೋಪಾಲ್‌ಗಂಜ್‌ನಲ್ಲಿ ಈ ಘಟನೆ ನಡೆದಿದೆ.
ಪ್ರಕರಣ ಸಂಬಂಧ ಶುಕ್ರವಾರ 160 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ನಗರದಲ್ಲಿ ವಿಧಿಸಲಾಗಿದ್ದ ಕರ್ಫ್ಯೂವನ್ನು ವಿಸ್ತರಿಸಲಾಗಿದೆ. ಭದ್ರತಾ ಪಡೆಗಳೊಂದಿಗಿನ ಘರ್ಷಣೆ ವೇಳೆ ಪ್ರತಿಭಟನಕಾರರು ಬಿದಿರಿನ ಕೋಲು ಮತ್ತು ಇಟ್ಟಿಗೆಗಳನ್ನು ಹಿಡಿದುಕೊಂಡಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಮತ್ತು ಮಾಧ್ಯಮಗಳು ವರದಿ ಮಾಡಿವೆ.
ಪೊಲೀಸರು ಮತ್ತು ಸ್ಥಳೀಯಾಡಳಿತದ ವಾಹನಗಳಿಗೆ ಪ್ರತಿಭಟನಕಾರರು ಹಾನಿ ಮಾಡಿದ್ದಾರೆ. ಎನ್‌ಸಿಪಿ ಬೆಂಗಾವಲು ಪಡೆಯ ಮೇಲೆ ದಾಳಿಗೆ ಯತ್ನಿಸಿದ್ದಾರೆ ಮತ್ತು ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಲು ಪ್ರಚೋದಿಸಿದ್ದಾರೆ ಎಂದು ವರದಿ ತಿಳಿಸಿದೆ.




