ಜಕಾರ್ತಾ: ಭಾರತದ ನಿಕೋಬಾರ್ ದ್ವೀಪಗಳ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ 6.5 ತೀವ್ರತೆಯ ಭೂಕಂಪ ಸಂಭವಿಸಿದೆ. ಆದರೆ, ಸುನಾಮಿ ಎಚ್ಚರಿಕೆ ನೀಡಿಲ್ಲ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಮತ್ತು ಸುನಾಮಿ ಎಚ್ಚರಿಕೆ ವ್ಯವಸ್ಥೆ ತಿಳಿಸಿದೆ.
ಪಶ್ಚಿಮ ಇಂಡೋನೇಷ್ಯಾದ ಅಕೆಹ್ ಪ್ರಾಂತ್ಯದ ವಾಯುವ್ಯಕ್ಕೆ 259 ಕಿಲೋಮೀಟರ್ ದೂರದಲ್ಲಿ ಮತ್ತು ಭೂಮಿಯಿಂದ 10 ಕಿಲೋಮೀಟರ್ (ಆರು ಮೈಲಿ) ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುಎಸ್‌ಜಿಎಸ್ ತಿಳಿಸಿದೆ.
2004ರಲ್ಲಿ ಈ ಪ್ರಾಂತ್ಯದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 15 ದೇಶಗಳ 2,20,000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.




