ಕಾಸರಗೋಡು: ಅಸೌಖ್ಯದಿಂದ ಬಳಲುತ್ತಿದ್ದ 16ರ ಹರೆಯದ ಬಾಲಕಿಗೆ ಮಂತ್ರವಾದದ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ 72ರ ಹರೆಯದ ವ್ಯಕ್ತಿಯನ್ನು ವಿದ್ಯಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಪೋಕ್ಸೋ ಅನ್ವಯ ಕೇಸು ದಾಖಲಿಸಲಾಗಿದೆ.
ಆದೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಾಲಕಿಯ ದೂರಿನನ್ವಯ ಈತನನ್ನು ಬಂಧಿಸಲಾಗಿದೆ. 2023ರಲ್ಲಿ ಘಟನೆ ನಡೆದಿದ್ದು, ಶಾಲೆಯಲ್ಲಿ ಇತ್ತೀಚೆಗೆ ನಡೆದ ಕೌನ್ಸೆಲಿಂಗ್‍ನಲ್ಲಿ ವಿಷಯ ಬಹಿರಂಗಗೊಂಡಿದೆ. ಮಂತ್ರವಾದ ಚಿಕಿತ್ಸೆ ನೆಪದಲ್ಲಿ ಆದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬಾಲಕಿಯನ್ನು ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ತನ್ನ ಮನೆಗೆ ಕರೆಸಿಕೊಂಡಿದ್ದ ಈತ ನಂತರ ಮನೆಯಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.

