HEALTH TIPS

ಸಂಸತ್‌ ಅಧಿವೇಶನದಲ್ಲಿ ಭಾಗಿಯಾಗಲು ಜೈಲಿನಲ್ಲಿರುವ ಸಂಸದ ರಶೀದ್‌ಗೆ ಅವಕಾಶ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಭಾಗಿಯಾಗಲು ಜೈಲಿನಲ್ಲಿರುವ ಸಂಸದ ಎಂಜಿನಿಯರ್‌ ರಶೀದ್‌ಗೆ ದೆಹಲಿ ನ್ಯಾಯಾಲಯ ಪೆರೋಲ್‌ ನೀಡಿದೆ. 

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದ ಸಂಸದ ರಶೀದ್‌ಗೆ ಜುಲೈ 24ರಿಂದ ಆಗಸ್ಟ್‌4ರವರೆಗೆ ಸಂಸತ್‌ನ ಮುಂಗಾರು ಅಧಿವೇಶನದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ.

ಭಯೋತ್ಪಾದನೆಗೆ ಹಣಕಾಸಿನ ನೆರವು ನೀಡಿದ್ದ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ 2019ರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ರಶೀದ್‌ ಅವರನ್ನು ಬಂಧಿಸಿತ್ತು. ಅಂದಿನಿಂದ ಅವರನ್ನು ತಿಹಾರ್‌ ಜೈಲಿನಲ್ಲಿ ಇರಿಸಲಾಗಿತ್ತು.

ಅಧಿವೇಶನದಲ್ಲಿ ಭಾಗಿಯಾಗಲು ರಶೀದ್‌ ಅವರಿಗೆ ಹೆಚ್ಚುವರಿ ಸೆಷನ್‌ ಜಡ್ಜ್‌ ಚಂದೇರ್‌ ಜಿತ್ ಸಿಂಗ್‌ ಅವರು ಕಸ್ಟಡಿ ಪೆರೋಲ್‌ ನೀಡಿದ್ದಾರೆ. ಪೆರೋಲ್‌ ವೇಳೆ ರಶೀದ್‌ ಜತೆಗೆ ಶಸ್ತ್ರಸಜ್ಜಿತ ಪೊಲೀಸ್ ಸಿಬ್ಬಂದಿ ಇರಲಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ಬಾರಾಮುಲ್ಲಾ ಕ್ಷೇತ್ರದಲ್ಲಿ ಒಮರ್‌ ಅಬ್ದುಲ್ಲಾ ಅವರನ್ನು ಪರಾಭವಗೊಳಿಸಿ ಗೆಲುವು ಸಾಧಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries