ಕಾಸರಗೋಡು: ಮೇಲ್ಪರಂಬ ಹಾಗೂ ಮಂಜೇಶ್ವರ ಠಾಣೆಯಲ್ಲಿ ಎರಡು ಪ್ರತ್ಯೇಕ ಪೋಕ್ಸೋ ಕೇಸು ದಆಖಲಾಗಿದ್ದು, ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಮಡಿದ್ದಾರೆ. ಮೇಲ್ಪರಂಬ ಪೊಲೀಸ್ ಠಾಣೆ ವ್ಯಾಪ್ತಿಯ ಹನ್ನೊಂದರ ಹರೆಯದ ಬಾಲಕಗೆ ಸಲಿಂಗ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ, ವಿದೇಶದಲ್ಲಿ ಉದ್ಯೋದಲ್ಲಿರುವ, ಪೆರುಂಬಳ ನಿವಾಸಿ ಹಾರಿಸ್ ಎಂಬಾತನ ವಿರುದ್ಧ ಪೊಲೀಸರು ಕೇಸು ದಆಖಲಿಸಿಕೊಂಡಿದ್ದಾರೆ. ಆರೋಪಿ ತಲೆಮರೆಸಿಕೊಂಡಿದ್ದು, ಈತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈತ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿರುವುದಾಗಿ ಸಂಶಯಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಂಗಡಿಗೆ ಸಾಮಗ್ರಿ ಖರೀದಿಗೆ ಆಗಮಿಸಿದ 14ರ ಹರೆಯದ ಬಾಲಕಿಗೆ ಕಿರುಕುಳ ನೀಡಿದ ಅಂಗಡಿ ಮಾಲಿಕ, 60ರ ಹರೆಯದ ವ್ಯಕ್ತಿ ವಿರುದ್ಧ ಕೇಸು ದಾಖಲಿಸಿಕೊಂಡಿದ್ದು, ಈತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಸಾಮಗ್ರಿಗೆ ತೆರಳಿದ್ದ ಬಾಲಕಿಗೆ ಕಿರುಕುಳ ನೀಡಿರುವ ವಿಚಾರವನ್ನು ಮನೆಯವರಲ್ಲಿ ತಿಳಿಸಿದ್ದು, ಹೆತ್ತವರು ದೂರು ನೀಡಿದ್ದರು. ಎರಡೂ ಪ್ರಕರಣಕ್ಕೆ ಸಂಬಂಧಿಸಿ ಪೋಕ್ಸೋ ಅನ್ವಯ ಕೇಸು ದಾಖಲಿಸಲಾಗಿದೆ.




