ಕಾಸರಗೋಡು: ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ನವೀಕರಣ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆಯ ಯಶಸ್ಸಿನಲ್ಲಿ ಭಾಗಿಯಾದ ಕಾಸರಗೋಡು ನಗರಸಮಿತಿಯ ಹಾಗೂ ವಿವಿಧ ಉಪಸಮಿತಿಯ ಕಾರ್ಯಕರ್ತರ ಅಭಿನಂದನಾ ಸಭೆ ಕಾಸರಗೋಡು ಕೋಟೆಎಕಣಿ ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಭಾಂಗಣದಲ್ಲಿ ಜರುಗಿತು.
ಮಧೂರು ದೇವಸ್ಥಾನ ನವೀಕರಣ, ಬ್ರಹ್ಮಕಲಶೋತ್ಸವ ಮತ್ತು ಮೂಡಪ್ಪ ಸೇವೆ ಕಾಸರಗೋಡು ನಗರ ಸಮಿತಿಯ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾಸರಗೋಡು ನಗರ ಸಮಿತಿ ಅಧ್ಯಕ್ಷ ಬಾಲಕೃಷ್ಣ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು.
ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಜಯದೇವ ಖಂಡಿಗೆ, ಮಧೂರು ಕ್ಷೇತ್ರ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಪ್ರಸಾದ್, ಧಾರ್ಮಿಕ ಮುಖಂಡ ಕೆ ವಿಶ್ವನಾಥ್ ಕೊರಕ್ಕೋಡ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕಾಸರಗೋಡು ನಗರ ಸಮಿತಿ ಉಪಾಧ್ಯಕ್ಷ ವಕೀಲ ಸದಾನಂದ ರೈ ಅಭಿನಂದಬನಾ ಮಾತುಗಳನ್ನಾಡಿದರು. ಈ ಸಂದರ್ಭ ಮಧೂರು ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಮಾಣಪತ್ರ, ದೇವರ ಛಾಯಾಚಿತ್ರ, ಸ್ಮರಣ ಸಂಚಿಕೆ ವಿವಿಧ ಸಮಿತಿಯ ಕಾರ್ಯಕರ್ತರಿಗೆ ವಿತರಿಸಲಾಯಿತು.
ಕಾಸರಗೋಡು ನಗರ ಸಮಿತಿ ಕಾರ್ಯಾಧ್ಯಕ್ಷ ಕೃಷ್ಣ ಪ್ರಸಾದ್ ಕೋಟೆಕಣಿ ಸ್ವಾಗತಿಸಿದರು. ಜಗದೀಶ್ ಕೂಡ್ಲು, ಕಾವ್ಯಕುಶಲ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಕೋಟೆಕಣಿ ವಂದಿಸಿದರು. ಕೋಟೆಕಣಿ ಶ್ರೀ ರಾಮನಾಥ ಮಹಿಳಾ ಭಜನಾ ವೃಂದದವರು ಪ್ರಾರ್ಥನೆ ಹಾಡಿದರು.


