ಅಗರ್ತಲಾ: ತ್ರಿಪುರಾದ ಅಂತರರಾಷ್ಟ್ರೀಯ ಗಡಿ ಬಳಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ನಡೆಸಿದ ಗುಂಡಿನ ದಾಳಿಯಲ್ಲಿ ಬಾಂಗ್ಲಾದೇಶದ ಇಬ್ಬರು ಶಂಕಿತ ಮಾದಕ ವಸ್ತು ಕಳ್ಳಸಾಗಣೆದಾರರು ಹತರಾಗಿದ್ದಾರೆ.
ಅಮ್ಜದ್‌ನಗರದಲ್ಲಿ ಬಿಎಸ್‌ಎಫ್ ನಡೆಸಿದ ಕಾರ್ಯಾಚರಣೆಯಲ್ಲಿ ಬಾಂಗ್ಲಾದೇಶದ ಒಬ್ಬರು ಗಾಯಗೊಂಡಿದ್ದು, ಭಾರತದ ಇಬ್ಬರು ಕಳ್ಳಸಾಗಣೆದಾರರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.
ಭಾರಿ ಪ್ರಮಾಣದ ಮಾದಕ ವಸ್ತು ಕಳ್ಳಸಾಗಣೆ ಮಾಡುವ ಪ್ರಯತ್ನ ಕಂಡು ಬಂದಿತು. ಕಳ್ಳಸಾಗಣೆದಾರರು ದಾಳಿಗೆ ಮುಂದಾದರು. ಈ ವೇಳೆ ಗುಂಡಿನ ದಾಳಿ ನಡೆಸಲಾಯಿತು. ಸ್ಥಳದಲ್ಲಿ ₹15 ಲಕ್ಷ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.




