ಕುಂಬಳೆ: ಮುಜುಂಗಾವು ಶ್ರೀ ಭಾರತಿ ವಿದ್ಯಾಪೀಠದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ಜಾಗೃತಿ ಹಾಗೂ ಗಿಡ ನಾಟಿ ಕಾರ್ಯಕ್ರಮ ಜರಗಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಯಂತಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ್ ಭಟ್ ದರ್ಬೆಮಾರ್ಗ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಸಿ.ಪಿ.ಸಿ.ಆರ್.ಐ.ಯ ನಿವೃತ್ತ ಅಧಿಕಾರಿ ದೇವಣ್ಣ ಮಾತನಾಡಿ ಪರಿಸರಪ್ರಜ್ಞೆಯನ್ನು ಬೆಳೆಸಿಕೊಂಡು ನಾಳಿನ ಒಳ್ಳೆಯ ದಿನಕ್ಕಾಗಿ ಇಂದಿನ ವಿದ್ಯಾರ್ಥಿಗಳು ಗಿಡನೆಟ್ಟು ಬೆಳೆಸುವ ಪರಿಪಾಠವನ್ನು ಮಾಡಿಕೊಳ್ಳಬೇಕು. ಪರಿಸರ ಸಂರಕ್ಷಣೆ ನಮ್ಮ ಹೊಣೆಯಾಗಿದೆ ಎಂಬುದನ್ನು ಪ್ರತಿಯೊಬ್ಬರೂ ಅರಿತಿರಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಗ್ರಾಮಪಂಚಾಯಿತಿ ಸದಸ್ಯೆ ಪ್ರೇಮಲತಾ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಶಿಕಾಲ ಸುವರ್ಣ, ಮೇಲ್ವಿಚಾರಕ ಅಭಿಷೇಕ್, ಶಾಲಾ ಹಿರಿಯ ಸಂಸ್ಕøತ ಅಧ್ಯಾಪಕ ಬಾಲಕೃಷ್ಣ ಶರ್ಮ ಅನಂತಪುರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪರಿಸರ ದಿನಾಚರಣೆಯ ಅಂಗವಾಗಿ ರಸಪ್ರಶ್ನೆ ಹಾಗೂ ಬಿತ್ತಿಪತ್ರ ರಚನೆ ಸ್ಪರ್ಧೆಯನ್ನು ಏರ್ಪಡಿಸಿದ್ದು ವಿಜೇತ ವಿದ್ಯಾರ್ಥಿಗಳಿಗೆ ಗಿಡಗಳನ್ನು ಬಹುಮಾನವಾಗಿ ನೀಡಿ ಪ್ರೋತ್ಸಾಹಿಸಲಾಯಿತು. ಶಾಲವಠಾರದಲ್ಲಿ ಗಿಡಗಳನ್ನು ನೆಡಲಾಯಿತು. ವಿದ್ಯಾರ್ಥಿನಿಯರಿಂದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು. ಕೃಷಿಮೇಲ್ವಿಚಾರಕಿ ಪ್ರಿಯಾ ಸ್ವಾಗತಿಸಿ ಅಧ್ಯಾಪಕ ಹರಿಪ್ರಸಾದ್ ನಿರೂಪಿಸಿದರು.

.jpg)
