ಕಾಸರಗೋಡು: ಜಿಲ್ಲೆಯಲ್ಲಿ ಗಾಳಿಯಿಂದ ಕೂಡಿದ ಮಳೆ ಮುಂದುವರಿದಿದ್ದು, ಜಿಲ್ಲೆಯಲ್ಲಿ ವ್ಯಾಪಕ ಹಾನಿ ಸಂಭವಿಸಿದೆ. ಬಿರುಸಿನ ಗಾಳಿಗೆ ಜಿಲ್ಲೆಯ ವಿವಿಧೆಡೆ ಹಲವಾರು ಅಡಕೆಮರಗಳು, ವಿದ್ಯುತ್ ಕಂಬಗಳು ಧರಾಶಾಯಿಯಾಗಿದೆ.
ಕೇಂದ್ರ ಹವಾಮಾನ ಇಲಾಖೆ ಈ ಹಿಂದೆ ನೀಡಿದ್ದ ಮುನ್ಸೂಚನೆ ಪ್ರಕಾರ ಭಾನುವಾರ ಯೆಲ್ಲೋ ಅಲರ್ಟ್ ಜಾರಿಯಲ್ಲಿದ್ದರೂ, ಕೊನೆ ಕ್ಷಣದಲ್ಲಿ ಬದಲಾಗಿ ಆರೆಂಜ್ ಅಲರ್ಟ್Áಗಿ ಬದಲಾಗಿತ್ತು. ಕಾಸರಗೋಡು, ಕಣ್ಣೂರು, ಇಡುಕ್ಕಿ ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗಿತ್ತು. ಜುಲೈ 29ರ ವರೆಗೆ ಕಾಸರಗೋಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ. ಕೇರಳ, ಕರ್ನಾಟಕ ಹಾಗೂ ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕಾಸರಗೋಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅತ್ಯಂತ ಎತ್ತರದ ಅಲೆಗಳು ಹಾಗೂ ಬಿರುಸಿನ ಸಮದ್ರಕೊರೆತಕ್ಕೂ ಸಾಧ್ಯವಿರುವುದಾಗಿ ರಾಷ್ಟ್ರೀಯ ಸಮುದ್ರ ಅಧ್ಯಯನ ಕೇಂದ್ರ ಮುನ್ಸೂಚನೆ ನೀಡಿದೆ.





