ಬದಿಯಡ್ಕ: ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಐದನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಗುರುವಾರ ಆರಂಭಗೊಂಡಿದ್ದು, ಸೆ. 7ರ ವರೆಗೆ ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಎಡನೀರು ಶ್ರೀಮಠದಲ್ಲಿ ಜರಗಲಿದೆ.
ಗುರುವಾರ ಬೆಳಗ್ಗೆ 8ಕ್ಕೆ ವ್ಯಾಸಪೂಜೆ, ಚಾತುರ್ಮಾಸ್ಯ ವ್ರತಸಂಕಲ್ಪ, ಹೋಮಗಳ ಪೂರ್ಣಾಹುತಿ ನಡೆಯಿತು. 9ಕ್ಕೆ 60 ದಿನಗಳ ಕಾಲ ನಡೆಯಲಿರುವ ಭಜನಾ ಸಂಕೀರ್ತನೆಗೆ ಕೆ.ಎಲ್.ಉಪಾಧ್ಯಾಯ ಚಾಲನೆ ನೀಡಿದರು. ಎಡನೀರು ಶ್ರೀಗಳು, ಮಠದ ಆಡಳಿತಾಧಿಕಾರಿ ರಾಜೇಂದ್ರ ಕಲ್ಲೂರಾಯ, ಚಾತುರ್ಮಾಸ್ಯ ಸ್ವಾಗತ ಸಮಿತಿ ಅಧ್ಯಕ್ಷ ಸುರೇಶ್ ನಾಯಕ್ ಪೂನಾ ಮೊದಲಾದವರು ಉಪಸ್ಥಿತರಿದ್ದರು.
ಬಳಿಕ ಎಡನೀರು ಶ್ರೀ ಗೋಪಾಲಕೃಷ್ಣ ಮಹಿಳಾ ಭಜನಾ ಮಂಡಳಿಯಿಂದ ಭಜನೆ ನಡೆಯಿತು. 11 ರಿಂದ ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಮತ್ತು ಬಳಗದವರಿಂದ ಭಕ್ತಿ ಸಂಗೀತ ನಡೆಯಿತು. ಮಧ್ಯಾಹ್ನ 2.30ಕ್ಕೆ ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಿತು. ಶ್ರೀ ಮಧ್ವಾಚಾರ್ಯ ಮೂಲಸಂಸ್ಥಾನಂ ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಶ್ರೀಪಾದಂಗಳವರು ಆಶೀರ್ವಚನ ನೀಡಿದರು. ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ದಿವ್ಯ ಉಪಸ್ಥಿತಿಯಲ್ಲಿ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ. ಎಂ. ಮೋಹನ ಆಳ್ವ ಸಮಾರಂಭ ಉದ್ಘಾಟಿಸಿದರು. ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಅಧ್ಯಕ್ಷತೆ ವಹಿಸಿದ್ದರು.ಇ.ಮಹಾಬಲೇಶ್ವರ ಭಟ್, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಬಿ. ಸೀತಾರಾಮ ತೋಳ್ಪಡಿತ್ತಾಯ ಉಪಸ್ಥಿತರಿದ್ದರು.
ಸಂಜೆ 5ಕ್ಕೆ 'ವೇಣು ನಿನಾದ' ಸಂಗೀತ ಕಾರ್ಯಕ್ರಮದಲ್ಲಿ ವಿದ್ವಾನ್ ಶಶಾಂಕ್ ಸುಬ್ರಹ್ಮಣ್ಯಂ ಚೆನ್ನೈ ಕೊಳಲು, ವಿದ್ವಾನ್ ವಿಠಲ್ ರಾಮಮೂರ್ತಿ ಚೆನ್ನೈ ವಯಲಿನ್ ಹಾಗೂ ವಿದ್ವಾನ್ ಪತ್ರಿ ಸತೀಶ್ ಕುಮಾರ್ ಚೆನ್ನೈ ಮೃದಂಗದಲ್ಲಿ ಸಹಕರಿಸಿದರು.

.jpg)
.jpg)
.jpg)
.jpg)
.jpg)
.jpg)
.jpg)
