ಎಕ್ಸ್ ಪೋಸ್ಟ್ ಮೂಲಕ ನಿರ್ಗಮಿಸಿದ ಉಪರಾಷ್ಟ್ರಪತಿಗೆ ಮೋದಿ ಶುಭಾಶಯಗಳನ್ನು ಕೋರಿದ್ದಾರೆ.
'ಜಗದೀಪ್ ಧನಕರ್ ಅವರಿಗೆ ಭಾರತದ ಉಪರಾಷ್ಟ್ರಪತಿ ಹುದ್ದೆ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ನಮ್ಮ ದೇಶಕ್ಕೆ ಸೇವೆ ಸಲ್ಲಿಸಲು ಹಲವು ಅವಕಾಶಗಳು ಸಿಕ್ಕಿವೆ.
ಅವರಿಗೆ ಉತ್ತಮ ಆರೋಗ್ಯ ಸಿಗಲಿ ಎಂದು ಹಾರೈಸುತ್ತೇನೆ' ಎಂದು ಅವರು ಬರೆದುಕೊಂಡಿದ್ದಾರೆ.
ಧನಕರ್ ಅವರು ಸೋಮವಾರ ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಕಳುಹಿಸಿದ್ದರು.
'ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿ ತಕ್ಷಣವೇ ಜಾರಿಗೆ ಬರುವಂತೆ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ' ಎಂದು ಅವರು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.
74 ವರ್ಷದ ಧನಕರ್, ಆಗಸ್ಟ್ 2022 ರಲ್ಲಿ ಅಧಿಕಾರ ವಹಿಸಿಕೊಂಡಿದ್ದರು.




