ಬದಿಯಡ್ಕ: 54ನೇ ವರ್ಷದ ಬದಿಯಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ನ್ಯಾಯವಾದಿ ನರಸಿಂಹ ಶೆಣೈ ಬಿಡುಗಡೆಗೊಳಿಸಿದರು. ಬದಿಯಡ್ಕ ಗ್ರಾಮಪಂಚಾಯಿತಿ ಸದಸ್ಯ ಬಾಲಕೃಷ್ಣ ಶೆಟ್ಟಿ ಕಡಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಮಿತಿಯ ಅಧ್ಯಕ್ಷ ನರೇಂದ್ರ ಬಿ ಯನ್ ಅಧ್ಯಕ್ಷತೆ ವಹಿಸಿದ್ದರು. ಕೋಶಾಧಿಕಾರಿ ದೇವದಾಸ್ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಿತಿಯ ಸದಸ್ಯರು, ಭಗವದ್ಭಕ್ತರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ರೈ.ಕೆ. ಸ್ವಾಗತಿಸಿ, ಕಾರ್ಯದರ್ಶಿ ರಾಜೇಶ್ ಬಿ.ಕೆ. ವಂದಿಸಿದರು.

.jpg)
