ಲಂಡನ್: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಭಾರತೀಯ ಮೂಲದ ನವರೂಪ್ ಸಿಂಗ್ ಎಂಬಾತನಿಗೆ ಲಂಡನ್ ಕೋರ್ಟ್ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ.
13 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಇನ್ನೊಬ್ಬ ಬಾಲಕಿಗೆ ಲೈಂಗಿಕ ದೌರ್ಜನ್ಯ, ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನ ಸೇರಿದಂತೆ ನವರೂಪ್ ಸಿಂಗ್ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿದ್ದವು.
ವಿಧಿವಿಜ್ಞಾನ ಸಾಕ್ಷ್ಯಗಳು ಹಾಗೂ ಸಿಸಿಟಿವಿ ದೃಶ್ಯ ಆಧರಿಸಿ ಲಂಡನ್ ಪೊಲೀಸರು ಆರೋಪಿಯನ್ನು 2024ರ ಅಕ್ಟೋಬರ್‌ನಲ್ಲಿ ಬಂಧಿಸಿದ್ದರು.
'ಈ ಪ್ರಕರಣಗಳಲ್ಲಿ ಧೈರ್ಯದಿಂದ ಮುಂದೆ ಬಂದು ದೂರು ದಾಖಲಿಸಿದ ಸಂತ್ರಸ್ತರು ಮತ್ತು ಅವರ ಕುಟುಂಬದವರನ್ನು ಅಭಿನಂದಿಸುವುದಾಗಿ' ಮುಖ್ಯ ತನಿಖಾಧಿಕಾರಿ ಸೆನ್ ಲಿಂಚ್ ಹೇಳಿದ್ದಾರೆ.




