ಬದಿಯಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜನಜಾಗೃತಿ ವೇದಿಕೆ ಕಾಸರಗೋಡು ತಾಲೂಕು ನೇತೃತ್ವದಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ದಿನಾಚರಣೆ ಕಾರ್ಯಕ್ರಮ ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜು ಹೈಸ್ಕೂಲಿನಲ್ಲಿ ಇತ್ತೀಚೆಗೆ ನಡೆಯಿತು. ಈ ಸಂದರ್ಭ ಮಕ್ಕಳಿಗೆ ತರಗತಿ ನಡೆಸಲಾಯಿತು.
ಜನಜಾಗೃತಿ ವೇದಿಕೆ ಕಾಸರಗೋಡು ತಾಲೂಕು ಅಧ್ಯಕ್ಷ ಅಖಿಲೇಶ್ ನಗುಮುಗಂ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಪೋಷಕರನ್ನು ಗೌರವಿಸುವುದರ ಜೊತೆಗೆ ಭವಿಷ್ಯತ್ತಿನ ಉತ್ತಮ ಪ್ರಜೆಗಳಾಗಲು ಹಾಗೂ ಉತ್ತಮ ಸಮಾಜ ನಿರ್ಮಿಸಲು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನವಹಿಸಬೇಕು. ಯಾವುದೇ ಕಾರಣಕ್ಕು ಮಾದಕ ವಸ್ತುಗಳ ವ್ಯಸನಿಗಳಾಗಬಾರದು. ಕುಟುಂಬದ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ಮಾದಕ ವಸ್ತುಗಳಿಂದ ಜಾಗೃತರಾಗಿರಬೇಕು. ಸ್ವಸ್ಥ ಸಮಾಜದಲ್ಲಿ ಆರೋಗ್ಯವಂತ ಜೀವನವನ್ನು ನಡೆಸಬೇಕು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಇಂತಹ ಕಾರ್ಯಕ್ರಮಗಳಿಗೆ ಆದ್ಯತೆ ನೀಡುತ್ತದೆ ಎಂದರು.
ಒಕ್ಕೂಟದ ಅಧ್ಯಕ್ಷೆ ಶಿವಾನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಯುವ ಬರಹಗಾರ್ತಿ ತೇಜಶ್ರೀ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲ ಸುಬ್ರಹ್ಮಣ್ಯ ಎಂ., ಮೇಲ್ವಿಚಾರಕಿ ಸುಗುಣ ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿಗಳಾದ ಬೇಬಿ ಸ್ವಾಗತಿಸಿ, ಅನಿತ ಕುಮಾರಿ ವಂದಿಸಿದರು.

.jpg)
