ಮಂಜೇಶ್ವರ: ಮೀಯಪದವು ಶ್ರೀ ವಿದ್ಯಾವರ್ಧಕ ಪ್ರೌಢ ಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದ ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ ಉದ್ಘಾಟನೆ ಹಾಗೂ ವ್ಯಂಗ್ಯ ಚಿತ್ರ ಕಾರ್ಯಾಗಾರ ಗುರುವಾರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ಡಾ.ಮೊಹಮ್ಮದಾಲಿ ನೆರವೇರಿಸಿದರು. ಖ್ಯಾತ ವ್ಯಂಗ್ಯ ಚಿತ್ರ ಕಲಾವಿದ ಬಾಲಸುಬ್ರಹ್ಮಣ್ಯ. ಕೆ.ಯಂ. ಅತಿಥಿಯಾಗಿ ಉಪಸ್ಥಿತರಿದ್ದರು. ಶಾಲಾ ಮುಖ್ಯಸ್ಥೆ ಮೃದುಲಾ.ಕೆ.ಯಂ ಶುಭ ಹಾರೈಸಿದರು. ಶಾಲಾ ಸಂಚಾಲ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ವರೆಗೆ ಶಾಲೆಯಲ್ಲಿ ಕೈಕೊಂಡ ಕನ್ನಡ ಸಾಹಿತ್ಯ ಪರ ಕಾರ್ಯಕ್ರಮಗಳ ಅವಲೋಕನವನ್ನು ಕನ್ನಡ ಅಧ್ಯಾಪಕಿ ಸಾವಿತ್ರಿ ಅವರು ನಡೆಸಿಕೊಟ್ಟರು. ಕನ್ನಡ ಅಧ್ಯಾಪಕರಾದ ರಾಜಾರಾಮ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಅಧ್ಯಾಪಕಿ ಸುಧಾ.ಕೆ.ಯಂ. ಕಾರ್ಯಕ್ರಮ ನಿರೂಪಿಸಿದರು. ಗಣಿತ ಅಧ್ಯಾಪಕ ಪ್ರಭಾಕರ ವಂದಿಸಿದರು. ಶಾಲಾ ಅಧ್ಯಾಪಕ ವೃಂದ, ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಯಶಸ್ವಿಯಾಗಿ ಪಾಲ್ಗೊಂಡರು. ಉದ್ಘಾಟನಾ ಕಾರ್ಯಕ್ರಮದ ನಂತರ ವ್ಯಂಗ್ಯ ಚಿತ್ರ ಕಾರ್ಯಾಗಾರವನ್ನು ಖ್ಯಾತ ವ್ಯಂಗ್ಯ, ಚಿತ್ರ ರಚನೆಗಾರ ಬಾಲ ಮಧುರಕಾನನ ಅವರು ನಡೆಸಿಕೊಟ್ಟರು. ವಿದ್ಯಾರ್ಥಿಗಳು ಆಸಕ್ತಿಯಿಂದ ಕಾರ್ಯಾಗಾರದಲ್ಲಿ ಭಾಗವಹಿಸಿದರು.

.jpg)
