ಕಾಸರಗೋಡು : ಉಕ್ಕಿನಡ್ಕದ ಕಾಸರಗೋಡು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಾನಾ ವಿಭಾಗಗಳಲ್ಲಿ ತೆರವಾಗಿರುವ ಜೂನಿಯರ್ ರೆಸಿಡೆಂಟ್ ಹುದ್ದೆಗಳ ನೇಮಕಾತಿಗೆ ಜುಲೈ 2ರಂದು ಬೆಳಗ್ಗೆ 11ಕ್ಕೆ ಕಾಲೇಜು ಪ್ರಾಂಶುಪಾಲರ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ.
ಎಂಬಿಬಿಎಸ್ ಮತ್ತು ಟಿಸಿಎಂಸಿ ನೋಂದಣಿ ಹೊಂದಿರುವ ಅಭ್ಯರ್ಥಿಗಳನ್ನು ಗರಿಷ್ಠ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು. ಅಭ್ಯರ್ಥಿಗಳು ತಮ್ಮ ಅರ್ಹತೆ ಮತ್ತು ಕೆಲಸದ ಅನುಭವವನ್ನು ಸಾಬೀತುಪಡಿಸಲಿರುವ ಅಗತ್ಯ ಪ್ರಮಾಣಪತ್ರಗಳೊಂದಿಗೆ ಹಾಜರಿರಬೇಕು. ಹೆಚ್ಚು ಅರ್ಹತೆ ಮತ್ತು ಕೆಲಸದ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು ಎಂದು ವೈದ್ಯಕೀಯ ಕಾಲೇಜು ಆಸ್ಪತ್ರೆ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.




