ಕಾಸರಗೋಡು: ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ ಮತ್ತು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಈ ಹಿನ್ನೆಲೆಯಲ್ಲಿ, ಜನರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಜಿಲ್ಲಾಧಿಕಾರಿಗಳು ಜುಲೈ 17 ರ ಗುರುವಾರ(ನಾಳೆ) ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಶಾಲೆಗಳು, ಕಾಲೇಜುಗಳು, ವೃತ್ತಿಪರ ಕಾಲೇಜುಗಳು, ಕೇಂದ್ರೀಯ ವಿದ್ಯಾಲಯಗಳು, ಬೋಧನಾ ಕೇಂದ್ರಗಳು, ಮದರಸಾಗಳು, ಅಂಗನವಾಡಿಗಳು ಮತ್ತು ವಿಶೇಷ ತರಗತಿಗಳಿಗೆ ರಜೆ ಅನ್ವಯಿಸುತ್ತದೆ.
ಈ ಹಿಂದೆ ನಿಗದಿಪಡಿಸಲಾದ ಎಲ್ಲಾ ಪರೀಕ್ಷೆಗಳು (ವೃತ್ತಿಪರ, ವಿಶ್ವವಿದ್ಯಾಲಯ ಮತ್ತು ಇತರ ಇಲಾಖಾ ಪರೀಕ್ಷೆಗಳು ಸೇರಿದಂತೆ) ವೇಳಾಪಟ್ಟಿಯ ಪ್ರಕಾರ ನಡೆಯುತ್ತವೆ. ಪರೀಕ್ಷಾ ಸಮಯದಲ್ಲಿ ಯಾವುದೇ ಬದಲಾವಣೆ ಇಲ್ಲ.
ವಿವರಗಳಿಗಾಗಿ:
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಕಾಸರಗೋಡು
ದೂರವಾಣಿ: +91 94466 01700 ಸಂಪರ್ಕಿಸಬಹುದಾಗಿದೆ.




