ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಅನುದಾನಿತ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಇದರ ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ ಅನುದಾನದಿಂದ ನವೀಕರಿಸಿದ ಶಾಲಾ ತರಗತಿ ಕೋಣೆಗಳ ಮತ್ತು ಶೌಚಾಲಯಗಳ ಉದ್ಘಾಟನಾ ಕಾರ್ಯಕ್ರಮ ಶಾಲಾ ರಾಮಕೃಷ್ಣ ರಾವ್ ಸಭಾಭವನದಲ್ಲಿ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ಜೋರ್ಜ್ ಕ್ರಾಸ್ತ ಸಿ.ಎಚ್. ವಹಿಸಿ ಶುಭಹಾರೈಸಿದರು. ಎಂ.ಆರ್.ಪಿ.ಎಲ್. ನ ಆಪರೇಶನ್ ವಿಭಾಗದ ಸಹಾಯಕ ಸಂಚಾಲಕ ಪ್ರದೀಪ್ ಕುಮಾರ್ ಉದ್ಘಾಟಿಸಿದರು. ಕಾಟಿಪಳ್ಳದ ವಕೀಲ ಸದಾಶಿವ ಐತಾಳ ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು. ಶಾಲಾ ಸಂಚಾಲಕಿ ರಾಜೇಶ್ವರಿ ಎಸ್. ರಾವ್, ಪಿಟಿಎ ಅಧಕ್ಷ ಸನತ್ ಕುಮಾರ್, ಎಂಪಿಟಿಎ ಅಧ್ಯಕ್ಷೆ ಸ್ವಾತಿ ದೇರಂಬಳ ಉಪಸ್ಥಿತರಿದ್ದರು. ಶಾಲಾ ಆಡಳಿತ ಸಲಹೆಗಾರ ಶ್ರೀಧರ ರಾವ್ ಆರ್.ಎಂ. ಸ್ವಾಗತಿಸಿ, ಮುಖ್ಯ ಶಿಕ್ಷಕ ಅರವಿಂದಾಕ್ಷ ಭಂಡಾರಿ ವಂದಿಸಿದರು. ಅಧ್ಯಾಪಕ ಹರೀಶ್ ಸುಲಾಯ ಒಡ್ಡಂಬೆಟ್ಟು ಕಾರ್ಯಕ್ರಮ ನಿರೂಪಿಸಿದರು.




.jpg)
